ನವದೆಹಲಿ : ಕೋವಿಡ್ 19 ಕುರಿತಂತೆ ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದ್ದು ಕಳೆದ ಕಳೆದ 24 ಗಂಟೆಯಲ್ಲಿ 50,209 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ಬಿಡುಗಡೆ ಮಾಡಿದೆ.
ದೇಶದಲ್ಲಿ ಒಟ್ಟು 5,27,962 ಸಕ್ರಿಯ ಪ್ರಕರಣಗಳಿದ್ದು ಇದುವರೆಗೂ 77,11,809 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 55,331 ಜನರು ಡಿಸ್ಚಾರ್ಜ್ ಆಗಿದ್ದಾರೆ ಎಂದು ಮಾಹಿತಿ ನೀಡಿದೆ.
ಮಹಾರಾಷ್ಟ್ರ ದೇಶದಲ್ಲೇ ಅತೀ ಹೆಚ್ಚು ಸೋಂಕಿತರು ಇರುವ ರಾಜ್ಯವಾಗಿದ್ದು , ರಾಜ್ಯದಲ್ಲಿ ಬುಧವಾರ 5,505 ಹೊಸ ಕೊರೋನಾ ಕೇಸ್ ದಾಖಲಾಗಿದೆ. ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದ್ದು 3,377 ಪ್ರಕರಣಗಳು ದಾಖಲಾಗಿವೆ.ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು 35,693 ಗಳಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 8,35,773 ಕ್ಕೆ ಏರಿಕೆಯಾಗಿದೆ.
ದೇಶದ ರಾಜಧಾನಿ ನವದೆಹಲಿಯಲ್ಲಿ ನಿನ್ನೆ ಒಂದೇ ದಿನದಲ್ಲಿ 6,482 ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಕಳೆದೆರಡು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡುಬರುತ್ತಿದೆ.ರಾಜ್ಯದಲ್ಲಿ ಹೊಸ ಸೋಂಕಿತರ ಸಂಖ್ಯೆ ಆರು ಸಾವಿರದ ಗಡಿ ದಾಟಿದ್ದು ಆತಂಕಕ್ಕೆ ಕಾರಣವಾಗಿದೆ.