ಬಿಹಾರ: ಬಿಹಾರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಗೆಲುವು ಸಾಧಿಸಿದ್ದು, ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಿತೀಶ್ ಕುಮಾರ್ ಅವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಅವಿರೋಧ ಆಯ್ಕೆ ಮಾಡಲಾಗಿದೆ.
ಇಂದು ನಡೆದ ಎನ್ಡಿಎ ಮತ್ತು ಜೆಡಿಯು ಜಂಟಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಸಭೆ ನಂತರ ಮಾತನಾಡಿರುವ ನಿತೀಶ್ ಕುಮಾರ್, ನಾನು ಮುಖ್ಯಮಂತ್ರಿಯಾಗಬೇಕು ಎಂದು ಬಯಸಿರಲಿಲ್ಲ. ಬಿಜೆಪಿ ಒತ್ತಾಯ ಮಾಡಿದ್ದಕ್ಕೆ ಸಿಎಂ ಅಗಲು ಒಪ್ಪಿಕೊಂಡಿದ್ದೇನೆ. ಬಿಜೆಪಿಯಿಂದಲೇ ಯಾರಾದರೂ ಮುಖ್ಯಮಂತ್ರಿಯಾಗಲಿ ಎಂದು ಬಯಸಿದ್ದೆ ಎಂದಿದ್ದಾರೆ.
ನಿತೀಶ್ ಕುಮಾರ್ ಬಿಹಾರದಲ್ಲಿ 7 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ತಯಾರಿ ನಡೆಸಿಕೊಳ್ಳುತ್ತಿದ್ದಾರೆ. ಇನ್ನು ಬಿಜೆಪಿ ನಾಯಕ ಸುಶೀಲ್ ಕುಮರ್ ಮೋದಿ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.