Saturday, June 19, 2021
No menu items!
Home Bharata 108 ಬೈಕ್ ಕದ್ದ ಖತರ್ನಾಕ್ ಖದೀಮರು ..!!!

108 ಬೈಕ್ ಕದ್ದ ಖತರ್ನಾಕ್ ಖದೀಮರು ..!!!

ಆಂಧ್ರ ಪ್ರದೇಶ:  ಬರೋಬ್ಬರಿ 108 ಬೈಕ್ಗಳನ್ನು ಕಳುವು ಮಾಡಿದ ಖತರ್ನಾಕ್ ಖದೀಮರಿಬ್ಬರನ್ನು ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕವದಿ ನಾನಿ ಸಿಂಗಮ್ ಮತ್ತು ಬಂಡಿ ಶಿವ ಎಂದು ಗುರುತಿಸಲಾಗಿದೆ.
ಇಬ್ಬರು ಸಹ ಈಸ್ಟ್ ಗೋದಾವರಿ ಜಿಲ್ಲೆಯ ಅಲಮರು ಮಂಡಲದ ಮಡಿಕಿ ಗ್ರಾಮದವರು. ಬಂಧಿತರಿಂದ ಸುಮಾರು 43 ಲಕ್ಷ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನು ಹೊರತುಪಡಿಸಿದರೆ, ಪ್ರಕರಣದಲ್ಲಿ ಇತರೆ ಆರೋಪಿಗಳಾದ ಕಾಥೆಟಿ ಚಿನ್ನ, ಸಿಂಗಿದಿ ಹರಿ ದುರ್ಗ ಪ್ರಸಾದ್, ಚಿಂತಾಲ ಲವ ರಾಜು ಮತ್ತು ಗುತ್ತಲ ಶ್ರೀನು ಎಂಬುವವರನ್ನು ಬಂಧಿಸಲಾಗಿದೆ. ಇವರು ಕದ್ದ ಬೈಕ್ಗಳನ್ನು ಕೊಂಡು ಮಾರಾಟ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
ಸುಮಾರು 108 ಬೈಕ್ಗಳನ್ನು ಆಂಧ್ರ ಪ್ರದೇಶದ 9 ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ್ದಾರೆ. ಈಸ್ಟ್ ಗೋದಾವರಿ ಜಿಲ್ಲೆಯಿಂದ 34, ವೆಸ್ಟ್ ಗೋದಾವರಿ ಜಿಲ್ಲೆಯಲ್ಲಿ 22, ವಿಶಾಖಪಟ್ಟಣಂದಿಂದ 43, ವಿಜಯವಾಡದಿಂದ 7 ಮತ್ತು ವಿಜಯನಗರಂದಿಂದ ಎರಡು ಬೈಕ್ಗಳನ್ನು ಕದ್ದಿದ್ದಾರೆ. ಸದ್ಯ ಬಂಧಿತವಾಗಿರುವ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 379, 411 ಮತ್ತು 413ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪದೇ ಪದೇ ಬೈಕ್ ಕಳ್ಳ ತನ ಪ್ರಕರಣ ಹೆಚ್ಚುತ್ತಿದ್ದರಿಂದ ಅಲರ್ಟ್ ಆಗಿದ್ದಂತ ಆಂಧ್ರಪ್ರದೇಶದ ಈಸ್ಟ್ ಗೋದಾವರಿ ಜಿಲ್ಲೆಯ ಪೊಲೀಸರಿಗೆ ಈಸ್ಟ್ ಗೋದಾವರಿ ಜಿಲ್ಲೆಯ ಮಂಡಲದ ಮಡಕಿ ಗ್ರಾಮದ ಕವದಿ ನಾನಿ ಸಿಂಗಮ್ ಮತ್ತು ಬಂಡಿ ಶಿವ ಎಂಬ ಇಬ್ಬರು ಅನುಮಾನಾಸ್ಪದವಾಗಿ ತಿರುಗಾಡುತ್ತಿರುವ ವೇಳೆಯಲ್ಲಿ ಸಿಕ್ಕಿ ಬಿದ್ದಿದ್ದಾರೆ.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments