Friday, September 24, 2021
No menu items!
Home Karnataka ರಾಜ್ಯದಲ್ಲಿಂದು 1509 ಹೊಸ ಕೊರೋನಾ ಕೇಸ್: 24 ಮಂದಿ ಸಾವು

ರಾಜ್ಯದಲ್ಲಿಂದು 1509 ಹೊಸ ಕೊರೋನಾ ಕೇಸ್: 24 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಕಳೆದ 24 ಗಂಟೆಗಳಲ್ಲಿ 1509 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದು 24ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಕುಟುಂಬ ಮತ್ತು ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ 24,708 ಸಕ್ರೀಯ ಪ್ರಕರಣಗಳಿದ್ದು ಇದುವರೆಗೂ ರಾಜ್ಯದಲ್ಲಿ ಮಹಾಮಾರಿ ಕೊರೋನಾ ಸೋಂಕಿನಿಂದ 11,678 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 1,645 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡಿರುವವರ ಸಂಖ್ಯೆ 8,38,150ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 725 ಜನರಿಗೆ ಸೋಂಕು ತಗುಲಿದ್ದು 10 ಮಂದಿ ಬಲಿಯಾಗಿದ್ದಾರೆ. ಇನ್ನುಳಿದಂತೆ ತುಮಕೂರು 89, ಮಂಡ್ಯ 58, ಕಲಬುರ್ಗಿ 56, ಕೋಲಾರ 35, ಬಳ್ಳಾರಿ 34, ಉತ್ತರಕನ್ನಡ 30, ದಕ್ಷಿಣಕನ್ನಡ 28, ಚಿಕ್ಕಮಗಳೂರು 21 ಸೇರಿದಂತೆ ರಾಜ್ಯದಲ್ಲಿ 1509 ಜನರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ತನ್ನ ಬುಲೆಟಿನ್ ನಲ್ಲಿ ತಿಳಿಸಿದೆ.

ಇನ್ನು ಕೊವಿಡ್ 19 ಲಸಿಕೆ ವಿತರಣೆ ಕುರಿತಂತೆ ನಾಳೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಲಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿರುವ ಕೊರೊನಾ ಪರಿಸ್ಥಿತಿ,ಕೊರೊನಾ ಲಸಿಕೆ ತಯಾರಿಕೆ, ಲಸಿಕೆ ಹಂಚಿಕೆ ಕುರಿತು ನಾಳೆ ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಧಾನಿ ಸಭೆ ನಡೆಸಲಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments