Wednesday, June 16, 2021
No menu items!
Home Bharata ಒಎಲ್ಎಕ್ಸ್ ನಲ್ಲಿ ವಂಚಿಸಿದ ನಾಲ್ವರ ಬಂಧನ: ಇವರು ಮಾಡಿದ ಮೋಸ ಏನು ಗೊತ್ತಾ..?

ಒಎಲ್ಎಕ್ಸ್ ನಲ್ಲಿ ವಂಚಿಸಿದ ನಾಲ್ವರ ಬಂಧನ: ಇವರು ಮಾಡಿದ ಮೋಸ ಏನು ಗೊತ್ತಾ..?

ಬೆಂಗಳೂರು: ಒಎಲ್ಎಕ್ಸ್ ಮೂಲಕ ಮೋಸ ಹೋಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಕುರಿತು ಹಲವಾರು ಪ್ರಕರಣಗಳು ವಿವಿಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂತೆಯೇ, ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ.

OLX ನಲ್ಲಿ ವಂಚಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. . ಸೆಕೆಂಡ್ ಹ್ಯಾಂಡ್ ವಸ್ತುಗಳ ಖರೀದಿ ಮತ್ತು ಮಾರಾಟದ ಪ್ರಮುಖ ವೆಬ್ಸೈಟ್ ಓಎಲ್ಎಕ್ಸ್ ಮೂಲಕ 20ಕ್ಕೂ ಹೆಚ್ಚು ಜನರಿಗೆ ಮೋಸ ಮಾಡಿದ ನಾಲ್ವರು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಓಎಲ್ಎಕ್ಸ್ ಮೂಲಕ ವಂಚನೆ ಮಾಡುತ್ತಿದ್ದ ನಾಲ್ವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಉಮರ್ ಖಾನ್, ಸೈದ್, ವಜೀಬ್, ಸಾಹಿಲ್ ಬಂಧಿತ ಆರೋಪಿಗಳು.

ರಾಜಸ್ಥಾನದ ಈ ನಾಲ್ವರು ಆರೋಪಿಗಳು ಬೆಂಗಳೂರಿನಲ್ಲಿ ವಾಸವಾಗಿದ್ದರು. ನಕಲಿ ಐಡಿ ಕಾರ್ಡ್, ದಾಖಲೆಗಳ ಮೂಲಕ ಆರೋಪಿಗಳು OLX ನಲ್ಲಿ ಕಡಿಮೆ ಬೆಲೆಗೆ ವಾಹನ ಮಾರಾಟಕ್ಕಿರುವ ಭಾವಚಿತ್ರವನ್ನು ಹರಿಬಿಡುತ್ತಿದ್ದರು. ನಂತರ ಗ್ರಾಹಕರು ವಾಹನ ಖರೀದಿಗಾಗಿ ಕರೆ ಮಾಡಿದಾಗ, ತಾವು ಸೇನೆಯಲ್ಲಿ ಕಾರ್ಯನಿರ್ವಹಿಸುವುದಾಗಿ ಹೇಳಿ ನಂಬಿಸುತ್ತಿದ್ದರು. ಸೇನೆಯಲ್ಲಿ ವರ್ಗಾವಣೆಗೊಂಡಿರುವುದರಿಂದ ಬೇರೆಡೆ ಹೋಗುತ್ತಿದ್ದು, ಅದಕ್ಕಾಗಿ ಕಾರು ಮಾರಾಟ ಮಾಡುತ್ತಿರುವುದಾಗಿ ಹೇಳುತ್ತಿದ್ದರು. ಬಳಿಕ ತಮ್ಮ ಖಾತೆಗೆ ಹಣ ವರ್ಗಾವಣೆ ಗೊಳ್ಳುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿ ಜನರಿಗೆ ಮೋಸ ಮಾಡುತ್ತಿದ್ದರು.

ಈ ರೀತಿ ಸುಮಾರು 20 ಜನರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ದೂರು ದಾಖಲಿಸಿ ತನಿಖೆ ಕೈಗೊಂಡಿದ್ದ ಸೈಬರ್ ಕ್ರೈಮ್ ಪೊಲೀಸರು ತನಿಖೆ ವೇಳೆ ಬೇರೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments