ನವದೆಹಲಿ: ಕೋವಿಡ್ 19 ಮಾಹಿತಿ ಕುರಿತಂತೆ ಕೇಂದ್ರ ಕುಟುಂಬ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದ್ದು ಕಳೆದ 24 ಗಂಟೆಗಳಲ್ಲಿ 45,882 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಒಟ್ಟಾರೆ ಸಂಖ್ಯೆ 90,04,366ಕ್ಕೆ ಏರಿಕೆಯಾಗಿದೆ.
ಇನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ 584 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,32,162ಕ್ಕೆ ಏರಿಕೆಯಾಗಿದೆ.ಇನ್ನು ನಿನ್ನೆ ಒಂದೇ ದಿನ 44,807 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೂ 84,28,410ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,83,397 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,95,91,786 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.
ಇನ್ನು ಅಮೇರಿಕಾ ಅತೀ ಹೆಚ್ಚು ಸೋಂಕಿತರನ್ನು ಹೊಂದಿದೆ. ಇಲ್ಲಿ ಈ ವರೆಗೆ ಒಟ್ಟು 1,20,66,609 ಪ್ರಕರಣಗಳು ದಾಖಲಾಗಿದ್ದು, 2,58,282 ಜನರು ಮೃತಪಟ್ಟಿದ್ದಾರೆ.ಅಮೇರಿಕದ ನಂತರದ ಸ್ಥಾನದಲ್ಲಿರುವ ಭಾರತದಲ್ಲಿ 90.04 ಲಕ್ಷ ಕೋವಿಡ್ 19 ಪ್ರಕರಣಗಳು ವರದಿಯಾಗಿವೆ.