Monday, January 24, 2022
No menu items!
Home Sports ಕೋಮಾದಲ್ಲಿದ್ದ ಕ್ರಿಕೆಟಿಗ ದುರ್ಮರಣ..!

ಕೋಮಾದಲ್ಲಿದ್ದ ಕ್ರಿಕೆಟಿಗ ದುರ್ಮರಣ..!

ಜಲಾಲಾಬಾದ್: ಅಫ್ಘಾನಿಸ್ತಾನದ ಕ್ರಿಕೆಟಿಗ ನಜೀಬ್ ತಾರಕೈ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಜಲಾಲಾಬಾದ್ ನಗರದಲ್ಲಿ ನಡೆದ ಕಾರು ಅಪಘಾತದಲ್ಲಿ 29 ವರ್ಷದ ನಜೀಬ್ ತಾರಕೈ ಅವರು ಗಂಭೀರ ಗಾಯಗೊಂಡಿದ್ದರು. ಅವರ ತಲೆಗೆ ಬಲವಾದ ಪೆಟ್ಟುಬಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಗೆ ದಾಖಲಿಸಿದ ನಂತರದಲ್ಲಿ ಕೋಮಾಕ್ಕೆ ಹೋಗಿದ್ದರು. ಅವರಿಗೆ ಪ್ರಜ್ಞೆ ಬರಿಸುವ ಪ್ರಯತ್ನಗಳು ನಡೆದಿದ್ದರೂ ಸಫಲವಾಗಲಿಲ್ಲ. ಕಳೆದ 22 ಗಂಟೆಗಳಿಂದ ಅವರು ಕೊಂಚವೂ ಕದಲಿಲ್ಲ. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ಈ ಅಪಘಾತದ ಸಂಗತಿಯನ್ನು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ (ಎಸಿಬಿ) ಮಾಜಿ ಮಾಧ್ಯಮ ವ್ಯವಸ್ಥಾಪಕ ಎಂ. ಇಬ್ರಾಹಿಂ ಮೊಮಂಡ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದರು.

ತಾರಕೈ ಅವರ ನಿಧನಕ್ಕೆ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತೀವ್ರ ಶೋಕ ವ್ಯಕ್ತಪಡಿಸಿದೆ. ‘ಎಸಿಬಿ ಮತ್ತು ಕ್ರಿಕೆಟ್ ಪ್ರೀತಿಸುವ ದೇಶವಾದ ಅಫ್ಘಾನಿಸ್ತಾನ್, ಟ್ರಾಫಿಕ್ ಅಪಘಾತದ ದುರಂತದಲ್ಲಿ ಆಕ್ರಮಣಕಾರಿ ಆರಂಭಿಕ ಆಟಗಾರ ಮತ್ತು ಬಹಳ ಮಾನವೀಯ ವ್ಯಕ್ತಿ ನಜೀಬ್ ತಾರಕೈ (29) ನಮ್ಮನ್ನೆಲ್ಲರನ್ನು ಅಗಲಿರುವ ಆಘಾತಕಾರಿ ಮತ್ತು ನೋವಿನ ಘಟನೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಮೇಲೆ ಅಲ್ಲಾ ದಯೆ ತೋರಲಿ’ ಎಂದು ಎಸಿಬಿ ಟ್ವೀಟ್ ಮಾಡಿದೆ.

News In Brief: Afghan cricketer Najeeb Tarakai passed away after car accident

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments