Saturday, June 19, 2021
No menu items!
Home Bharata ಸಿಬಿಐ ವಿಚಾರಣೆ ಮುಗಿಸಿ ಅಹ್ಮದ್ ಪಟೇಲ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ತೆರಳಿದ ಡಿಕೆಶಿ

ಸಿಬಿಐ ವಿಚಾರಣೆ ಮುಗಿಸಿ ಅಹ್ಮದ್ ಪಟೇಲ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ತೆರಳಿದ ಡಿಕೆಶಿ

ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಿಬಿಐ ವಿಚಾರಣೆಗೆ ಹಾಜರಾಗಿದ್ದರು. ಇನ್ನು ಕಾಂಗ್ರೆಸ್ ವರಿಷ್ಠ ಅಹ್ಮದ್ ಪಟೇಲ್ ನಿಧನದ ಹಿನ್ನೆಲೆಯಲ್ಲಿ ಕೇವಲ ನಲವತ್ತೇ ನಿಮಿಷದಲ್ಲಿ ವಿಚಾರಣೆ ಮುಗಿಸಿದ ಡಿಕೆಶಿ ವಡೋದರದತ್ತ ತೆರಳಿದ್ದಾರೆ.

ಕೆಲ ದಿನಗಳ ಹಿಂದೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಒಂದಿಷ್ಟು ದಾಖಲೆಗಳನ್ನ ಸಂಗ್ರಹಿಸಿ ಮಾಹಿತಿಯನ್ನ ಕೆದಕಿದ್ದರು. ಅದರಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಸಿಬಿಐ ಅಧಿಕಾರಿಗಳ ನೋಟಿಸ್ ಹಿನ್ನೆಲೆಯಲ್ಲಿ ದಾಖಲೆಗಳ ಸಮೇತ ಡಿಕೆ ಶಿವಕುಮಾರ್ ಸಿಬಿಐ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.

ದೆಹಲಿಯ ಸಿಬಿಐ ಕೇಂದ್ರ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿತ್ತು. ಆದರೆ ಇದಕ್ಕಿಂತಲೂ ಮುಂಚಿತವಾಗಿಯೇ ನಿಗದಿಯಾಗಿದ್ದ ರಾಜ್ಯ ಪ್ರವಾಸವನ್ನು ನಿಗದಿಪಡಿಸಿಕೊಂಡಿದ್ದ ಕಾರಣ ಶಿವಕುಮಾರ್ ಸಿಬಿಐ ಅಧಿಕಾರಿಗಳಿಗೆ ಮನವಿ ಮಾಡಿಕೊಂಡು, ವಿಚಾರಣೆಗೆ ದೆಹಲಿಯ ಬದಲು ಬೆಂಗಳೂರಿನ ಸಿಬಿಐ ಕಚೇರಿಗೆ ಆಗಮಿಸುವುದಾಗಿ ಕೇಳಿಕೊಂಡಿದ್ದರು. ಇದಕ್ಕೆ ಸಿಬಿಐ ಅಧಿಕಾರಿಗಳು ಕೂಡ ಒಪ್ಪಿಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಗಂಗಾ ನಗರದಲ್ಲಿರುವ ಸಿಬಿಐ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.

ಸಿಬಿಐ ಅಕ್ಟೋಬರ್ 5ರಂದು ಕರ್ನಾಟಕ, ದೆಹಲಿ ಮತ್ತು ಮುಂಬೈ ಸೇರಿದಂತೆ ಶಿವಕುಮಾರ್ ಮತ್ತು ಇತರರಿಗೆ ಸಂಬಂಧಿಸಿದ 14 ಸ್ಥಳಗಳಲ್ಲಿ ಶೋಧ ನಡೆಸಿತ್ತು. ಈ ವೇಳೆ ₹ 57 ಲಕ್ಷ ನಗದು ಮತ್ತು ಆಸ್ತಿ ದಾಖಲೆಗಳು, ಬ್ಯಾಂಕ್ ಸಂಬಂಧಿತ ಮಾಹಿತಿ, ಕಂಪ್ಯೂಟರ್ ಹಾರ್ಡ್​ ಡಿಸ್ಕ್ ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ₹ 74.93 ಕೋಟಿ ಮೌಲ್ಯದ ಆದಾಯಕ್ಕೂ ಮೀರಿದ ಆಸ್ತಿಯನ್ನು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಸಿಬಿಐ ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿತ್ತು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments