Thursday, September 23, 2021
No menu items!
Home Bharata ಪೂನಂ ಪಾಂಡೆ ಆಯ್ತು ಈಗ ಬೆತ್ತಲೆಯಾಗಿ ಓಡಿದ ಮಿಲಿಂದ್ ಸೋಮನ್ ವಿರುದ್ಧ ದೂರು ದಾಖಲು..!

ಪೂನಂ ಪಾಂಡೆ ಆಯ್ತು ಈಗ ಬೆತ್ತಲೆಯಾಗಿ ಓಡಿದ ಮಿಲಿಂದ್ ಸೋಮನ್ ವಿರುದ್ಧ ದೂರು ದಾಖಲು..!

ಪೂನಂ ಪಾಂಡೆ ಅರೆ ನಗ್ನವಾಗಿ ಗೋವಾ ಬೀಚಿನಲ್ಲಿ ಕಾಣಿಸಿಕೊಂಡ ಪರಿಣಾಮ ಪೊಲೀಸರ ಅತಿಥಿಯಾಗಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಡೆಲ್ ಮಿಲಿಂದ್ ಸೋಮನ್ ಕೂಡ ಬೀಚ್ ನಲ್ಲಿ ಸಂಪೂರ್ಣ ನಗ್ನವಾಗಿ ಓಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದಂತೆ ಪೂನಂ ಪಾಂಡೆ ಅಭಿಮಾನಿಗಳು ಪ್ರಶ್ನಿಸಿದ್ದರು. ಪೂನಂ ಪಾಂಡೆ ಬಂಧಿಸಿದಂತೆ ಮಿಲಿಂದ್ ನನ್ನು ಯಾಕೆ ಬಂಧಿಸಿಲ್ಲ ಎಂಬ ಪ್ರಶ್ನೆ ಎದ್ದಿತ್ತು. ಇದೀಗ ಪೊಲೀಸರು ಮಿಲಿಂದ್ ನನ್ನು ಬಂಧಿಸಿದ್ದಾರೆ.

ಐಪಿ ಕಾಯ್ದೆ (ಮಾಹಿತಿ ತಂತ್ರಜ್ಞಾನ ಕಾಯ್ದೆ) ಯ ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು) ಮತ್ತು 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ಪ್ರಕಟಿಸಲು / ರವಾನಿಸಲು ಶಿಕ್ಷೆ) ಅಡಿಯಲ್ಲಿ ಮಿಲಿಂದ್ ಸೋಮನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎಎನ್ಐ ಪ್ರಕಾರ, ನಟ ಮತ್ತು ಫಿಟ್ನೆಸ್ ಉತ್ಸಾಹಿ ಮಿಲಿಂದ್ ಸೋಮನ್ ಅವರನ್ನು ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ಗಾಗಿ ಬುಕ್ ಮಾಡಲಾಗಿದ್ದು, ಅಲ್ಲಿ ಅವರು ಬೀಚ್ನಲ್ಲಿ ಬೆತ್ತಲೆಯಾಗಿ ಓಡುತ್ತಿರುವುದು ಕಂಡುಬಂತು.

ದಕ್ಷಿಣ ಗೋವಾದ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಕುಮಾರ್ ಸಿಂಗ್ ಅವರು ಸೋಮನ್ ವಿರುದ್ಧ ಸೆಕ್ಷನ್ 294 ಐಪಿಸಿ ಮತ್ತು 67 ಐಟಿ ಕಾಯ್ದೆಯಡಿ ಕೊಲ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಎನ್ಐಗೆ ತಿಳಿಸಿದ್ದಾರೆ.

ತನ್ನ 55 ನೇ ಹುಟ್ಟುಹಬ್ಬದಂದು, ಮಿಲಿಂದ್ ಸೋಮನ್ ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಿಗೆ ಬೀಚ್ನಲ್ಲಿ ಬೆತ್ತಲೆಯಾಗಿ ಓಡುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿ,. ‘ನನಗೆ ಜನ್ಮದಿನದ ಶುಭಾಶಯಗಳು! ಎಂದು ಬರೆದುಕೊಂಡಿದ್ದರು.

ಮಿಲಿಂದ್ ಸೋಮನ್ ಕ್ಯಾಮರಾ ಮುಂದೆ ನಗ್ನರಾಗಿರುವುದು ಇದೇ ಮೊದಲೇನು ಅಲ್ಲ.1990 ರಲ್ಲಿ ಮಿಲಿಂದ್ ಸೋಮನ್ ಜಾಹಿರಾತಿಗೋಸ್ಕರ ಮಾಜಿ ಮಿಸ್ ಇಂಡಿಯಾ ಮಧು ಸಾಪ್ರೆ ಜೊತೆ ನಗ್ನರಾಗಿ ಪೋಸ್ ಕೊಟ್ಟಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments