Wednesday, October 27, 2021
No menu items!
Home Karnataka ಅಖಂಡನ ನೋವು ಅರ್ಥವಾಗುತ್ತೆ, ನ್ಯಾಯ ಒದಗಿಸಿ ಕೊಡುತ್ತೇನೆ: ಡಿಕೆಶಿ

ಅಖಂಡನ ನೋವು ಅರ್ಥವಾಗುತ್ತೆ, ನ್ಯಾಯ ಒದಗಿಸಿ ಕೊಡುತ್ತೇನೆ: ಡಿಕೆಶಿ

ಬೆಂಗಳೂರು: ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಾಟೆಯಲ್ಲಿ ಶಾಸಕ ಅಖಂಡ ಶ್ರೀನಿವಾಸ್ ಮನೆಗೂ ಬೆಂಕಿ ಹಚ್ಚಲಾಗಿದೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಸ್ಥಾನದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ನಿಂತಿದ್ದಾರೆ. ಈಗಾಗಲೇ ಸಂಪತ್ ರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಿದ್ದಾರೆ. ಈ ಮಧ್ಯೆ ಅವರ ವಿರುದ್ಧ ಶಿಸ್ತುಕ್ರಮಕ್ಕೆ ಅಖಂಡ ಶ್ರೀನಿವಾಸ್ ಒತ್ತಾಯಿಸಿದ್ದಾರೆ.

ಇಂದು ಬೆಳಗ್ಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸ್ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಸಂಪತ್ ರಾಜ್ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ.

ಈ ವೇಳೆ ಮಾತನಾಡಿರುವ ಡಿ ಕೆ ಶಿವಕುಮಾರ್, ಅಖಂಡ ನೋವು ನನಗೆ ಅರ್ಥ ಆಗುತ್ತೆ. ಕೆಲವೊಂದು ವಿಷಯ ಹೇಳಿದ್ದಾರೆ. ಖಂಡಿತಾ ಅವರಿಗೆ ನ್ಯಾಯ ಒದಗಿಸಿ ಕೊಡುತ್ತೇನೆ. ಶಿಸ್ತುಪಾಲನಾ ಸಮಿತಿಗೆ ಶಿಫಾರಸು ಮಾಡುವುದಾಗಿ ತಿಳಿಸಿದರು. ಮೂರು-ನಾಲ್ಕು ದಿನದಿಂದ ಭೇಟಿಗೆ ಸಮಯ ಕೇಳಿದ್ದರು. ನಾನು ಇವತ್ತು ಬರೋಕೆ ಹೇಳಿದ್ದೆ. ಅವರ ಸಮಸ್ಯೆ ಕೇಳಿದೆ. ಭಾರೀ ನೋವಲ್ಲಿ ಇದ್ದಾರೆ. ಅವರ ನೋವು ನನಗೆ ಅರ್ಥ ಆಗುತ್ತೆ. ನಾನೇ ಅವರ ಸ್ಥಾನದಲ್ಲಿದ್ದರೂ ನೋವಾಗುತ್ತಿತ್ತು ಎಂದು ಡಿಕೆಶಿ ಹೇಳಿದರು.

ಇದೇ ವೇಳೆ ಅಖಂಡ ಮಾತನಾಡಿ, ಮಾಜಿ ಮೇಯರ್ ಸಂಪತ್ ರಾಜ್, ಜಾಕೀರ್ ರನ್ನ ಪಕ್ಷದಿಂದ ಉಚ್ಚಾಟಿಸಬೇಕು ಅಂತ ಹೇಳಿದ್ದೀನಿ. ನ್ಯಾಯ ಸಿಗುತ್ತೆ ಅನ್ನೋ ಭರವಸೆ ಇದೆ. ಎಲ್ಲವನ್ನೂ ಹೇಳಿದ್ದೇನೆ. ವಿಚಾರವನ್ನ ಶಿಸ್ತು ಪಾಲನಾ ಸಮಿತಿಗೆ ಶಿಫಾರಸು ಮಾಡ್ತೀನಿ ಅಂದಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು. ನ್ಯಾಯ ಸಿಗುತ್ತೆ ಅನ್ನೊ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments