Wednesday, October 27, 2021
No menu items!
Home Karnataka ಸುಮಲತಾ ಏನು ಕೆಲಸ ಮಾಡಲ್ಲ ಎಂದ ಪ್ರತಾಪ್ ಸಿಂಹ ವಿರುದ್ಧ ತಿರುಗಿ ಬಿದ್ದ ರೆಬಲ್ ಅಭಿಮಾನಿಗಳು..!

ಸುಮಲತಾ ಏನು ಕೆಲಸ ಮಾಡಲ್ಲ ಎಂದ ಪ್ರತಾಪ್ ಸಿಂಹ ವಿರುದ್ಧ ತಿರುಗಿ ಬಿದ್ದ ರೆಬಲ್ ಅಭಿಮಾನಿಗಳು..!

ಮೈಸೂರು: ಇಂದು ಬೆಳಗ್ಗೆ ಕಾರ್ಯಕ್ರಮವೊಂದರಲ್ಲಿ ಪ್ರತಾಪ್ ಸಿಂಹ ಮಂಡ್ಯ ಸಂಸದೆ ಸುಮಲತಾ ಬಗ್ಗೆ ವಾಗ್ದಾಳಿ ನಡೆಸಿದ್ದರು. ಆ ಯಮ್ಮಾ ಏನು ಕೆಲಸ ಮಾಡಲ್ಲ ಅಂತ ಫೋನಿನಲ್ಲಿ ಹೇಳಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಆ ಮಾತಿಗೆ ಅಂಬರೀಶ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸದ ಪ್ರತಾಪ್‌ಸಿಂಹ ವಿರುದ್ದ ವಾಗ್ದಾಳಿ ನಡೆಸಿದ ಅಂಬರೀಶ್‌ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್, ಮಂಡ್ಯ ಜನರ ಸ್ವಾಭಿಮಾನವನ್ನ ಕೆಣಕಬೇಡಿ. ಇದು ಪ್ರತಾಪ್‌ ಸಿಂಹ ಅವರ ಸಣ್ಣತನದ ಹೇಳಿಕೆ. ತೋರ್ಪಡಿಕೆಗೋಸ್ಕರ ಉಡಾಫೆ ಹೇಳಿಕೆ ಕೊಟ್ಟಿದ್ದಾರೆ. ಇದು ಬಿಜೆಪಿಯ ಹೇಳಿಕೆಯಲ್ಲ, ಪ್ರತಾಪ್‌ ಸಿಂಹರ ಸಣ್ಣತನದ ಹೇಳಿಕೆ. ಭ್ರಷ್ಟ ಅಧಿಕಾರಿಯನ್ನ ಸಮರ್ಥಿಸುವ ಭರದಲ್ಲಿ ಸುಮಲಾತ ಅಂಬರೀಶ್ ವಿರುದ್ದ ಟೀಕೆ ಮಾಡಿದ್ದಾರೆ. ನೀವೇನೂ ಮೈಸೂರನ್ನ ಸಿಂಗಾಪುರ ಮಾಡಿದ್ದೀರಾ..? ಎಂದು ಪ್ರಶ್ನಿಸಿದ್ದಾರೆ.

ಪ್ರತಾಪ್‌ ಸಿಂಹರ ಈ ಹೇಳಿಕೆ ಪ್ರಜ್ಞಾವಂತ ಮೈಸೂರು ಜನತೆ ತಲೆ ತಗ್ಗಿಸುವಂತಹದ್ದು. ಮೈಸೂರಿಗೆ ಪ್ರಧಾನಿ ಬಂದ ವೇಳೆ ಸುಮಲತಾ ಹೆಸರೇಳಿದ್ದಾರೆ. ಪ್ರತಾಪ್‌ ಸಿಂಹರ ಹೆಸರೇಳಿಲ್ಲ, ಅಲ್ಲೆ ಗೊತ್ತಾಗುತ್ತೆ ನಿಮ್ಮ ಯೋಗ್ಯತೆ ಏನು ಅಂತ. ಮಂಡ್ಯ ಜನರು, ಸುಮಲತಾ ಅಂಬರೀಶ್‌ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ತಮಗಿಲ್ಲ ಎಂದು ಬೇಲೂರು ಸೋಮಶೇಖರ್ ಕಿಡಿಕಾರಿದರು.

ಯಲಿಯೂರಿನಲ್ಲಿ ಅಹವಾಲು ಸ್ವೀಕರಿಸುವ ವೇಳೆ ಬೆಂಗಳೂರು-ಮೈಸೂರು ದಶಪಥ ಕಾಮಗಾರಿ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಬಳಿ ಅಧಿಕಾರಿಯೊಬ್ಬರು ಸಂಸದೆ ಸುಮಲತಾ ವಿರುದ್ಧ ದೂರು ನೀಡಿದ್ದರು. ಸುಮಲತಾ ಯಾವುದೇ ಕೆಲಸ ಮಾಡಲು ಬಿಡುವುದಿಲ್ಲ ಎಂದು ದೂರು ನೀಡಿದ್ದರು.
ಈ ವೇಳೆ ಪ್ರತಿಕ್ರಿಯಿಸಿದ್ದ ಸಂಸದ ಪ್ರತಾಪ್ ಸಿಂಹ, ಹೆಚ್.ಡಿ. ದೇವೇಗೌಡರ ಕುಟುಂಬವನ್ನು ಸೋಲಿಸಲು ಮಂಡ್ಯದಲ್ಲಿ ಸುಮಲತಾ ಅವರನ್ನು ಗೆಲ್ಲಿಸಿದರು. ಆದರೆ ಅವರು ಯಾವುದೇ ಕೆಲಸ ಮಾಡುವುವವರಲ್ಲ. ಮಂಡ್ಯಕ್ಕೆ ಸಂಬಂಧಿಸಿದ ಏನೇ ಕೆಲಸಗಳಿದ್ದರೂ ನನಗೆ ಹೇಳಿ ಎಂದಿದ್ದ ವಿಡಿಯೋ ವೈರಲ್ ಆಗಿತ್ತು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments