ನವದೆಹಲಿ :ಕೇಂದ್ರ ಗೃಹ ಸಚಿವ ರಾದ ಅಮಿತ್ ಶಾ ಅವರು ಇಂದು ತಮ್ಮ 56 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.
1964 ರಲ್ಲಿ ಮುಂಬೈ ನಲ್ಲಿ ಜನಿಸಿದ ಅಮಿತ್ ಶಾ ಅವರು ತನ್ನ ರಾಜಕೀಯ ಜೀವನವನ್ನು ಆರ್ ಎಸ್ ಎಸ್ ನಿಂದ ಆರಂಭಿಸಿದರು.ಗುಜಾರತ್ ನಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು ನರೇಂದ್ರ ಮೋದಿಯವರು ಮುಖ್ಯಮಂತ್ರಿ ಗಳಾಗಿದ್ದ ಸಮಯದಲ್ಲಿ ಅಲ್ಲಿನ ಗೃಹಸಚಿವರಾಗಿ ಸೇವೆ ಸಲ್ಲಿಸಿದ್ದರು.
2014 ರಲ್ಲಿ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಅಮಿತ್ ಶಾ , ತಮ್ಮ ರಾಜಕೀಯ ಲೆಕ್ಕಾಚಾರಗಳ ಮೂಲಕ ” ಚಾಣಾಕ್ಯ” ಎಂದು ಗುರುತಿಸಿಕೊಂಡರು. ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಯನ್ನು ಗೆಲ್ಲುವಂತೆ ಮಾಡಿದ್ದು ಅಮಿತ್ ಶಾ ಅವರ ಚಾಣಾಕ್ಷತನಕ್ಕೆ ಸಾಕ್ಷಿ .
ಪ್ರಸ್ತುತ ಮೋದಿಯವರ ಸರ್ಕಾರದಲ್ಲಿ ಗೃಹಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಅಮಿತ್ ಶಾ , ಇಂದು 56 ನೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.