Tuesday, August 3, 2021
No menu items!
Home Bharata ಸೈನಿಕರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಮುಂದಾದ ಬಿಪಿನ್ ರಾವತ್

ಸೈನಿಕರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಮುಂದಾದ ಬಿಪಿನ್ ರಾವತ್

ದೆಹಲಿ: ಸಶಸ್ತ್ರ ಪಡೆಗಳ ಮಾನವ ಸಂಪನ್ಮೂಲ ಸಂಬಂಧ ಹೊಸ ಸುಧಾರಣೆಗಳನ್ನು ತರಲು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮುಂದಾಗಿದ್ದಾರೆ.

ಅಧಿಕಾರಿಗಳ ನಿವೃತ್ತಿ ವಯಸ್ಸು ಹಾಗೂ ತಾಂತ್ರಿಕ ಇಲಾಖೆಗಳಲ್ಲಿ ಸೈನಿಕರ ಹೆಚ್ಚಳಕ್ಕೆ ಚಿಂತನೆ ನಡೆಸಿದ್ದಾರೆ. ಈ ಹೊಸ ಚಿಂತನೆಗಳ ಭಾಗವಾಗಿ ಮಿಲಿಟರಿ ವ್ಯವಹಾರಗಳ ಇಲಾಖೆ ರಕ್ಷಣಾ ಪಡೆಗಳಲ್ಲಿ ಹೆಚ್ಚು ನುರಿತ ಸಿಬ್ಬಂದಿಯನ್ನು ಉಳಿಸಿಕೊಳ್ಳಲು ಹಾಗೂ ಅಕಾಲಿಕ ನಿವೃತ್ತಿಯನ್ನು ತೆಗೆದುಕೊಳ್ಳುವ ಅಧಿಕಾರಿಗಳ ಪಿಂಚಣಿಯನ್ನು ಪರಿಷ್ಕರಣೆ ಮಾಡಲಾಗುತ್ತದೆ ಎಂದು ಪ್ರಸ್ತಾಪಿಸಲಾಗಿದೆ.

ಸಶಸ್ತ್ರ ಪಡೆಗಳಲ್ಲಿ ಮಾನವಶಕ್ತಿಯನ್ನು ಗರಿಷ್ಠವಾಗಿ ಬಳಸಿಕೊಳ್ಳಲು ಈ ಎಲ್ಲಾ ಪ್ರಸ್ತಾಪಗಳನ್ನು ಮಂಡಿಸಲಾಗುತ್ತದೆ ಎಂದು ಸರ್ಕಾರದ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ. ಇದರಂತೆ ಕರ್ನಲ್ಗಳ ನಿವೃತ್ತಿ ವಯಸ್ಸನ್ನು ಮತ್ತು ಕರ್ನಲ್ ಶ್ರೇಣಿಯ ವಾಯುಪಡೆ ಹಾಗೂ ನೌಕಾಪಡೆಯ ಅಧಿಕಾರಿಗಳ ನಿವೃತ್ತಿ ವಯಸ್ಸನ್ನು 54ರಿಂದ 57ಕ್ಕೆ ಏರಿಸಲು, ಬ್ರಿಗೇಡಿಯರ್ಗಳು ಹಾಗೂ ಬ್ರಿಗೇಡಿಯರ್ ಶ್ರೇಣಿಯ ಅಧಿಕಾರಿಗಳ ನಿವೃತ್ತಿ ವಯಸ್ಸನ್ನು 56ರಿಂದ 58ಕ್ಕೆ,ಮೇಜರ್ ಜನರಲ್ಗಳ ನಿವೃತ್ತಿ ವಯಸ್ಸು 58ರಿಂದ 59ಕ್ಕೆ ಏರಿಸಲು ಪ್ರಸ್ತಾಪ ಮಾಡಲಾಗಿದೆ.

ಇನ್ನು ಪಿಂಚಣಿ ವಿಚಾರಕ್ಕೆ ಬರುವುದಾದರೆ 20-25 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಶೇಕಡಾ 50ರಷ್ಟು ಪಿಂಚಣಿ ಹಾಗೂ 25ರಿಂದ 30 ವರ್ಷ ಸೇವೆ ಸಲ್ಲಿಸಿರುವ ಸಿಬ್ಬಂದಿಗೆ ಶೇಕಡಾ 60ರಷ್ಟು ಪಿಂಚಣಿ ನೀಡಲು ಪ್ರಸ್ತಾಪಿಸಲಾಗಿದೆ. 35 ವರ್ಷ ಸೇವೆ ಸಲ್ಲಿಸಿದರಿಗೆ ಪೂರ್ಣ ಪ್ರಮಾಣದ ಪಿಂಚಣಿ ನೀಡಲು ನಿರ್ಧಾರ ಮಾಡಲಾಗಿದೆ. ಯುದ್ಧಭೂಮಿಯಲ್ಲಿ ಗಾಯಗೊಂಡು ನಿವೃತ್ತಿ ಹೊಂದಿದವರಿಗೆ ಯಾವುದೇ ರೀತಿಯಲ್ಲಿ ಪಿಂಚಣಿ ಪರಿಷ್ಕರಣೆ ಇಲ್ಲ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments