Monday, December 6, 2021
No menu items!
Home Latest ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಸದ್ದು ಮಾಡಿದ ಪೊಲೀಸ್ ಗನ್; ರೌಡಿಶೀಟರ್ ಕಾಲಿಗೆ ಗುಂಡು

ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಸದ್ದು ಮಾಡಿದ ಪೊಲೀಸ್ ಗನ್; ರೌಡಿಶೀಟರ್ ಕಾಲಿಗೆ ಗುಂಡು

ಬೆಂಗಳೂರು : ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ್ ಪಿಸ್ತೂಲ್ ಸೌಂಡ್ ಮಾಡಿದೆ. ಪೊಲೀಸರು ಶೂಟೌಟ್ ನಡೆಸಿ ನಟೋರಿಯಸ್ ರೌಡಿಶೀಟರ್ ಮಂಜ ಅಲಿಯಾಸ್ ಬೊಂಡ ಮಂಜನ ಕಾಲಿಗೆ ಗುಂಡು ಹಾರಿಸಿ ರೌಡಿಶೀಟರ್ ನನ್ನು ಬಂಧಿಸಲಾಗಿದೆ.

ರೌಡಿಶೀಟರ್ ಬೊಂಡ ಮಂಜನ ವಿರುದ್ಧ ಬರೋಬ್ಬರಿ 23 ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಆರೋಪಿಯ ಚಲನವಲದ ಮೇಲೆ ಸಿಸಿಬಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದರು. ಆರೋಪಿ ಇಂದು ನಗರದ ಕೋಣನಕುಂಟೆಯಲ್ಲಿ ಇರುವುದನ್ನ ಖಾತರಿಪಡಿಸಿಕೊಂಡ ಪೊಲೀಸರು ಆತನನ್ನ ಅರೆಸ್ಟ್ ಮಾಡಲು ತೆರಳಿದ್ದಾರೆ.

ಪೊಲೀಸರು ತನ್ನ ಬೆನ್ನಟ್ಟಿರುವುದು ಅರಿವಿಗೆ ಬಂದ ಕೂಡಲೇ ಬೊಂಡ ಮಂಜ ಪರಾರಿಯಾಗಲು ಯತ್ನಿಸಿದ್ದಾನೆ. ನಾರಾಯಣನಗರ ಬಳಿ ಬೈಕ್ ನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಮಂಜ ನನ್ನ ಸಿಸಿಬಿ ಇನ್ಸ್ಪೆಕ್ಟರ್ ಪುನೀತ್ ಮತ್ತು ತಂಡ ಅಡ್ಡಗಟ್ಟಿದೆ. ಈ ವೇಳೆ ಏಕಾಏಕಿ ಬೊಂಡ ಮಂಜ ತನ್ನ ಬಳಿಯಿದ್ದ ಡ್ರಾಗ್ಯರ್ ನಿಂದ ಸಿಸಿಬಿ ಹೆಡ್ ಕಾನ್ಸ್ಟೇಬಲ್ ನಾಗರಾಜ್ ಮೇಲೆ ದಾಳಿ ನಡೆಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಸಿಸಿಬಿ ಇನ್ಸ್ಪೆಕ್ಟರ್ ಪುನೀತ್ ಅವರ ಮೇಲೂ ರೌಡಿಶೀಟರ್ ಹಲ್ಲೆಗೆ ಮುಂದಾಗಿದ್ದಾನೆ.ಈ ವೇಳೆ ಇನ್ಸ್ಪೆಕ್ಟರ್ ಪುನೀತ್ ಆತ್ಮರಕ್ಷಣೆಗಾಗಿ ಮಂಜನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಆರೋಪಿಯನ್ನ ಶರಣಾಗುವಂತೆ ಹಲವು ಬಾರಿ ಹೇಳಿದರೂ ಕೇಳದಿದ್ದಾಗ ಸಿಸಿಬಿ ಇನ್ಸ್ಪೆಕ್ಟರ್ ಆತನನ್ನು ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊದಲಿಗೆ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಹೇಳಿದ್ದಾರೆ, ಕೇಳದಿದ್ದಾಗ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನ ಬಂಧಿಸಲಾಗಿದೆ.

ಗಾಯಾಳು ಮುಖ್ಯಪೇದೆ ನಾಗರಾಜ್ ಮತ್ತು ರೌಡಿಶೀಟರ್ ಬೊಂಡ ಮಂಜ ಇಬ್ಬರನ್ನೂ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಪ್ರಕರಣ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments