Thursday, September 16, 2021
No menu items!
Home Karnataka ಪೊಲೀಸರಿಗೆ ಬಂದ ಬೆದರಿಕೆ ಪತ್ರಕ್ಕೆ ಟ್ವಿಸ್ಟ್..!

ಪೊಲೀಸರಿಗೆ ಬಂದ ಬೆದರಿಕೆ ಪತ್ರಕ್ಕೆ ಟ್ವಿಸ್ಟ್..!

ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ ಹಾಗೂ ಡಿ.ಜೆ. ಹಳ್ಳಿ – ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ತನಿಖೆ ನಡೆಸದಂತೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್, ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಡಿಸಿಪಿ ರವಿಕುಮಾರ್ ಅವರಿಗೆ ಬೆದರಿಕೆ ಪತ್ರ ಬರೆದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಪತ್ರ ಬಂದಾದ ನಂತರ ತನಿಖೆ ನಡೆಸಲು 3 ಸಿಸಿಬಿ ತಂಡಗಳ ರಚನೆ ಮಾಡಲಾಗಿತ್ತು. ತನಿಖೆಯ ವೇಳೆ ಆಧಾರ್ ಕಾರ್ಡ್ ನಿಂದ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ದ್ವೇಷದ ಹಿನ್ನೆಲೆ ಪತ್ರ ಈ ಪತ್ರ ಬರೆಯಲಾಗಿದೆ ಎನ್ನಲಾಗಿದೆ. ತುಮಕೂರಿನ ಚೇಳೂರಿನ ರಾಜಶೇಖರ್ ಎಂಬುವವರು ಈ ಬೆದರಿಕೆ ಪತ್ರ ಬರೆದಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಗೆ ನಿನ್ನೆ ಸಂಜೆ ಅನಾಮಧೇಯ ಪತ್ರ ಬಂದಿತ್ತು. ಪತ್ರದಲ್ಲಿ ವೈರ್ಗಳಿರುವುದನ್ನು ಕಂಡು ತೀವ್ರ ಆತಂಕಕ್ಕೊಳಗಾಗಿ ಜಡ್ಜ್ ಹಲಸೂರು ಗೇಟ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾಗಿ ಪೊಲೀಸರ ಜೊತೆಗೆ ಸ್ಥಳಕ್ಕೆ ಆಗಮಿಸಿದ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳ ತಪಾಸಣೆ ನಡೆಸಿದಾಗ ಹುಸಿ ಬಾಂಬ್ ಪತ್ರ ಎಂಬುವುದು ಗೊತ್ತಾಗಿತ್ತು. ಆನಂತರ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಸಿಸಿಬಿಗೆ ಹಸ್ತಾಂತರಿಸಲಾಗಿತ್ತು. ಪೊಲೀಸ್ ಕಮೀಷನರ್ ಕಮಲ್ ಪಂತ್, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರಿಗೂ ಇನ್ನೆರಡು ಪತ್ರಗಳನ್ನು ಕಳುಹಿಸಿದ್ದು. ಪತ್ರದ ಜೊತೆಗೆ ಡಿಟೋನೆಟರ್ ಮಾದರಿಯ ವಸ್ತು ಹಾಗೂ ವೈರ್ ಗಳು ಸಿಕ್ಕಿದ್ದು, ಸಿಕ್ಕ ವಸ್ತುಗಳನ್ನು ಎಫ್.ಎಸ್.ಎಲ್ ಗೆ ರವಾನಿಸಲಾಗಿತ್ತು. ಪತ್ರ ಬರೆದ ಆರೋಪದ ಮೇಲೆ ಇಂದು ಇಬ್ಬರು ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments