Tuesday, August 3, 2021
No menu items!
Home Bharata ಅಂತರ್ ಧರ್ಮೀಯ ಮದುವೆ ವಿಚಾರವಾಗಿ ಮಹತ್ವದ ತೀರ್ಪು ನೀಡಿದ ಅಲಹಾಬಾದ್ ಹೈಕೋರ್ಟ್

ಅಂತರ್ ಧರ್ಮೀಯ ಮದುವೆ ವಿಚಾರವಾಗಿ ಮಹತ್ವದ ತೀರ್ಪು ನೀಡಿದ ಅಲಹಾಬಾದ್ ಹೈಕೋರ್ಟ್

ಅಲಹಾಬಾದ್: ಲವ್ ಜಿಹಾದ್ ವಿವಾದದ ನಡುವೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅರ್ಹ ವಯಸ್ಕ ವ್ಯಕ್ತಿಗಳು ತಮಗೆ ಬೇಕಾದ ಜೀವನ ಸಂಗಾತಿಯನ್ನು ಹುಡುಕಿಕೊಳ್ಳಲು ಹಕ್ಕು ಹೊಂದಿದ್ದಾರೆ ಎಂದು ಹೈಕೋರ್ಟ್ ತಿಳಿಸಿದೆ.

ಇಸ್ಲಾಂ ಧರ್ಮೀಯ ಸಲಾಮತ್ ಮತ್ತು ಹಿಂದೂ ಧರ್ಮೀಯ ಪ್ರಿಯಾಂಕಾ ಕರ್ವಾರ್ ಅವರು 2019ರ ಆಗಸ್ಟ್ 19ರಂದು ಮದುವೆಯಾಗಿದ್ದರು.ವಿವಾಹದ ಬಳಿಕ ಪ್ರಿಯಾಂಕಾ ಅವರ ಹೆಸರನ್ನು ಆಲಿಯಾ ಎಂದು ಬದಲಿಸಲಾಗಿತ್ತು. ಇದಾದ ನಂತರ ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಿಯಾಂಕಾರ ತಂದೆ ಎಫ್‌ಐಆರ್ ದಾಖಲಿಸಿದ್ದರು

ಇದನ್ನು ಪ್ರಶ್ನಿಸಿ ಉತ್ತರ ಪ್ರದೇಶದ ಕುಷಿನಗರದ ವಿಷ್ಣುಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಲಾಮತ್ ಅನ್ಸಾರಿ ಮತ್ತು ಇತರೆ ಮೂವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಇಬ್ಬರೂ ಪ್ರಾಪ್ತ ವಯಸ್ಸಿಗೆ ಬಂದಿರುವುದರಿಂದ ಎಫ್​ಐಆರ್​ನಲ್ಲಿ ಯಾವುದೇ ಹುರುಳಿಲ್ಲ ಎಂಬ ನಿಲುವಿಗೆ ಬಂದಿದೆ. ಈ ಪ್ರಕರಣವನ್ನು ಪೋಕ್ಸೋ ಕಾಯ್ದೆ ಅಡಿ ದಾಖಲಿಸಲು ಆಗುವುದಿಲ್ಲ ಎಂದು ಹೇಳಿದ ಉಚ್ಚ ನ್ಯಾಯಾಲಯ, ಎಫ್​ಐಆರ್ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಲವ್ ಜಿಹಾದ್ ನಂತಹ ಸೂಕ್ಷ್ಮ ವಿಚಾರದ ವಿಚಾರಣೆ ನಡೆಸಿದ ಹೈಕೋರ್ಟ್ ಇಬ್ಬರು ವಯಸ್ಕರು ಒಂದೇ ಲಿಂಗ ಅಥವಾ ಅನ್ಯ ಲಿಂಗಕ್ಕೆ ಸೇರಿರಲಿ, ಅವರು ಒಟ್ಟಿಗೆ ಬಾಳಲು ಕಾನೂನು ಅವಕಾಶ ನೀಡುತ್ತದೆ ಎಂದು ಕೋರ್ಟ್ ತಿಳಿಸಿದೆ. ಯಾವುದೇ ವ್ಯಕ್ತಿ ಅಥವಾ ಕುಟುಂಬವು ಅವರ ಶಾಂತಿಯುತ ಜೀವನದ ಮಧ್ಯೆ ಹಸ್ತಕ್ಷೇಪ ಮಾಡಲಾಗದು. ಇಬ್ಬರು ವಯಸ್ಕರ ನಡುವಿನ ಸಂಬಂಧಕ್ಕೆ ಸರ್ಕಾರ ಕೂಡ ಆಕ್ಷೇಪಣೆ ಸಲ್ಲಿಸಲು ಆಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments