ಪಾಟ್ನಾ : ಬಿಹಾರ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಪ್ರಚಾರ ಗರಿಗೆದರಿದೆ. ಎನ್ಡಿಎ ಪರ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪರ ರಾಹುಲ್ ಗಾಂಧಿ ಇಂದು ಬಿಹಾರದಲ್ಲಿ ಬೃಹತ್ ರ್ಯಾ ಲಿಯನ್ನು ನಡೆಸಲಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ ಭಾಗವಹಿ ಜನರನ್ನುದ್ದೇಶಿಸಿ ಮಾತನಾಡುವ ಮೂಲಕ ಮತಯಾಚನೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಟ್ವೀಟ್ ಮಾಡಿದ್ದು, “ನಾಳೆ ನನಗೆ ಬಿಹಾರದ ನನ್ನ ಸಹೋದರ ಸಹೋದರಿಯರೊಂದಿಗೆ ಇರಲು ಅವಕಾಶ ಸಿಗಲಿದೆ. ನಾನು ಸಸಾರಂ, ಗಯಾ ಮತ್ತು ಭಾಗಲ್ಪುರದಲ್ಲಿ ರ್ಯಾ ಲಿಗಳನ್ನು ಉದ್ದೇಶಿಸಿ ಮಾತನಾಡುತ್ತೇನೆ. ಈ ಸಮಯದಲ್ಲಿ ನಾನು ಎನ್ಡಿಎಯ ಅಭಿವೃದ್ಧಿ ಕಾರ್ಯಸೂಚಿಯನ್ನು ಜನರ ಮುಂದೆ ಇಡುತ್ತೇನೆ ಮತ್ತು ಜನರ ಆಶೀರ್ವಾದ ಕೇಳುತ್ತೇನೆ” ಎಂದಿದ್ದರು. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಹಲವಾರು ಸಾರ್ವಜನಿಕ ರ್ಯಾ ಲಿಗಳನ್ನು ಉದ್ದೇಶಿಸಿ ಬಿಜೆಪಿ ಈಗಾಗಲೇ ಬಿಹಾರ ಚುನಾವಣೆಗೆ ತನ್ನ ಸ್ಟಾರ್ ಲೈನ್ ಅಪ್ ಮಾಡಿದೆ.
ಮುಂದಿನ ಬುಧವಾರ ಆರಂಭವಾಗಲಿರುವ ಮೂರು ಹಂತದ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ ಸಹ ಇಂದಿನಿಂದ ಬಿಹಾರದಲ್ಲಿ ರ್ಯಾ ಲಿಗಳನ್ನು ನಡೆಸಲು ಯೋಜನೆ ರೂಪಿಸಿದ್ದಾರೆ. ಅವರು ನವಾಡಾದ ಹಿಸುವಾ ಮತ್ತು ಭಾಗಲ್ಪುರ್ ಜಿಲ್ಲೆಯ ಕಹಲ್ಗಾಂವ್ನಲ್ಲಿ ಎರಡು ರ್ಯಾ ಲಿಗಳನ್ನು ಉದ್ದೇಶಿಸಿ ಇಂದು ಮಾತನಾಡಲಿದ್ದಾರೆ.