Wednesday, June 16, 2021
No menu items!
Home Latest ಬಾಂಬೆ ಹೈಕೋರ್ಟ್ ನಿಂದ ಅರ್ನಬ್ ಗೋಸ್ವಾಮಿ ಮಧ್ಯಂತರ ಜಾಮೀನು ನಿರಾಕರಣೆ

ಬಾಂಬೆ ಹೈಕೋರ್ಟ್ ನಿಂದ ಅರ್ನಬ್ ಗೋಸ್ವಾಮಿ ಮಧ್ಯಂತರ ಜಾಮೀನು ನಿರಾಕರಣೆ

ಮುಂಬೈ: ನವೆಂಬರ್ 18 ರವರೆಗೆ ನ್ಯಾಯಾಂಗ ಬಂಧನದಲ್ಲಿರುವ ಅರ್ನಬ್ ಗೋಸ್ವಾಮಿ ಮಧ್ಯಂತರ ಜಾಮೀನು ಕೋರಿ ಮುಂಬೈ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಂಬೈ ಹೈಕೋರ್ಟ್ ಮಧ್ಯಂತರ ಜಾಮೀನನ್ನು ನಿರಾಕರಿಸಿದೆ.

ಅರ್ನಬ್ ಗೋಸ್ವಾಮಿಯ ಜಾಮೀನು ಅರ್ಜಿಯ ಬಗ್ಗೆ ಕಳೆದ ಶನಿವಾರ ವಿಚಾರಣೆ ನಡೆಸಿದ್ದ ಬಾಂಬೆ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತೀರ್ಪು ನೀಡಿದ್ದು, ಜಾಮೀನು ಅರ್ಜಿ ನಿರಾಕರಿಸಿ ಆದೇಶ ಹೊರಡಿಸಿದೆ.

ಮಧ್ಯಂತರ ಜಾಮೀನಿನ ಕುರಿತು ತೀರ್ಪು ನೀಡಿದ ಬಾಂಬೆ ಹೈಕೋರ್ಟ್ “ಆರೋಪಿಯು ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬಹುದು. ಸಂಬಂಧಿತ ನ್ಯಾಯಾಲಯವು ಅರ್ಜಿಯನ್ನು ನಿರ್ದಿಷ್ಟಪಡಿಸಿದ ಸಮಯ ಮಿತಿಯಲ್ಲಿ ನಿರ್ಧರಿಸುತ್ತದೆ ಎಂದಿದೆ.

2018 ರಲ್ಲಿ ನಡೆದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಸಾವಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಐಡಿ ಪೊಲೀಸರು ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ನವೆಂಬರ್ 4 ರಂದು ಬೆಳಿಗ್ಗೆ ವಶಕ್ಕೆ ಪಡೆದುಕೊಂಡಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments