Wednesday, June 16, 2021
No menu items!
Home Latest ಛತ್ತೀಸ್‍ಘಡದಲ್ಲಿ ಮೂವರು ನಕ್ಸಲರನ್ನು ಗುಂಡಿಟ್ಟು ಕೊಂದ ಭದ್ರತಾ ಪಡೆ

ಛತ್ತೀಸ್‍ಘಡದಲ್ಲಿ ಮೂವರು ನಕ್ಸಲರನ್ನು ಗುಂಡಿಟ್ಟು ಕೊಂದ ಭದ್ರತಾ ಪಡೆ

ಛತ್ತೀಸ್‍ಘಡ್: ಇಲ್ಲಿನ ಕಂಕರ್ ಜಿಲ್ಲೆಯ ತಡೋಕಿಯಲ್ಲಿ ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ನಕ್ಸಲರನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ.

ತಡೋಕಿಯಲ್ಲಿ ರೌಘಾಟ್ ಕಬ್ಬಿಣದ ಅದಿರು ರೌಘಾಟ್ ಕಬ್ಬಿಣದ ಅದಿರು ಯೋಜನೆಗಾಗಿ ನಡೆಯುತ್ತಿರುವ ರೈಲ್ವೆ ಮಾರ್ಗದ ಕಾಮಗಾರಿಗೆ ಭದ್ರತೆ ನೀಡುತ್ತಿದ್ದ ಸಶಸ್ತ್ರ ಸೀಮಾ ಬಲದ ಭದ್ರತಾ ಸಿಬ್ಬಂದಿ ಎಂದಿನಂತೆ ಗಸ್ತು ತಿರುಗುತ್ತಿದ್ದರು. ಈ ವೇಳೆ ಏಕಾಎಕಿ ನಕ್ಸಲರು ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದ ಎಸ್‌ಎಸ್ ಬಿ ಜವಾನರು, ಓರ್ವ ಮಹಿಳಾ ನಕ್ಸಲ್ ಸೇರಿದಂತೆ ಮೂವರು ಮಾವೋವಾದಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿರುವ ಬಸ್ತಾರ್ ಐಜಿ ಸುಂದರರಾಜ್ಕಂಕರ್ ಜಿಲ್ಲೆಯ ರಾವ್ಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಓರ್ವ ಮಹಿಳೆ ಸೇರಿದಂತೆ ಮೂವರು ನಕ್ಸಲರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಎಸ್ಎಸ್ ಬಿ ಹೆಡ್ ಕಾನ್ಸ್ಟೇಬಲ್ ಅಮನ್ ಕುಮಾರ್ ಎಂಬುವರು ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಐಜಿ ಮಾಹಿತಿ ನೀಡಿದ್ದಾರೆ.

ಸೋಮವಾರ ಬೆಳಿಗ್ಗೆ ಸುಮಾರು 8 ಗಂಟೆ ಆಸುಪಾಸಿನಲ್ಲಿ ಈ ಘಟನೆ ನಡೆದಿದೆ. ಎಸ್‌ಎಸ್‌ಬಿಯ 33ನೇ ಬೆಟಾಲಿಯನ್‌ ಕೋಸ್ರಂಡ ಶಿಬಿರದಲ್ಲಿ ಗಸ್ತು ನಿರತರಾಗಿದ್ದಾಗ ಈ ದಾಳಿ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments