Friday, September 24, 2021
No menu items!
Home Bharata ಕ್ರಿಸ್ ಗೇಲ್ ತನ್ನ ಕೋಪಕ್ಕೆ ಕಟ್ಟಿದ ದಂಡದ ಮೊತ್ತ ಎಷ್ಟು ಗೊತ್ತಾ..?

ಕ್ರಿಸ್ ಗೇಲ್ ತನ್ನ ಕೋಪಕ್ಕೆ ಕಟ್ಟಿದ ದಂಡದ ಮೊತ್ತ ಎಷ್ಟು ಗೊತ್ತಾ..?

ಮನುಷ್ಯನ ಕೋಪ, ಬೇಸರ ಒಮ್ಮೊಮ್ಮೆ ಅಮೂಲ್ಯವಾದ ವಸ್ತುಗಳನ್ನು ಕಳೆದುಕೊಳ್ಳುವಂತೆ ಮಾಡುತ್ತೆ. ಇನ್ನೊಮ್ಮೆ ಬೇಡದ ಕೋಪಕ್ಕೆ ದಂಡ ಕಟ್ಟುವಂತೆಯೂ ಮಾಡುತ್ತದೆ. ಅಂತದ್ದೇ ಕೋಪ, ಬೇಸರ ಕ್ರಿಸ್ ಗೇಲ್ ಗೆ ದಂಡ ಕಟ್ಟುವಂತೆ ಮಾಡಿದೆ.

ನಿನ್ನೆ ಕಿಂಗ್ಸ್ ಇಲವೆನ್ ಪಂಜಾಬ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆದ ಪಂದ್ಯದಲ್ಲಿ ರಾಜಸ್ಥಾನ್ ಗೆದ್ದಿದೆ. 185ರನ್ಗಳ ಬೃಹತ್ ಮೊತ್ತದೊಂದಿಗೆ ಆರ್ಆರ್ ಗೆದ್ದು ಬೀಗಿತ್ತು. ಈ ಮಧ್ಯೆ ಪಂದ್ಯದಲ್ಲಿ ಎಲ್ಲರ ಗಮನ ಸೆಳೆದಿದ್ದು ಗೇಲ್. ಅವರು ಬ್ಯಾಟ್ ಬೀಸಿ ಎಸೆದ ವಿಡಿಯೋ ಸಾಕಷ್ಟು ವೈರಲ್ ಆಗಿದೆ.

ಟಾಸ್ ಗೆದ್ದ ಆರ್ಆರ್ ನಾಯಕ ಸ್ಟೀವ್ ಸ್ಮಿತ್ ಬೌಲಿಂಗ್ ಆಯ್ದುಕೊಂಡರು. ಕಪ್ತಾನನ ನಿರ್ಧಾರ ಸರಿ ಎಂಬಂತೆ ಮೊದಲ ಓವರ್ನಲ್ಲೇ ಮಂದೀಪ್ ಸಿಂಗ್ ಅವರನ್ನು ಔಟ್ ಮಾಡುವ ಮೂಲಕ ಜೋಫ್ರಾ ಆರ್ಚರ್ ರಾಜಸ್ಥಾನ್ಗೆ ಮೊದಲ ಯಶಸ್ಸು ತಂದುಕೊಟ್ಟರು. ನಂತರ ಕ್ರಿಸ್ ಗೇಲ್ ಆರಂಭದಲ್ಲೇ ಆರ್ಭಟಿಸಲು ಆರಂಭಿಸಿದರು. ಅದರಲ್ಲೂ ಕಾರ್ತಿಕ್ ತ್ಯಾಗಿ ಎಸೆದ 5ನೇ ಓವರ್ನಲ್ಲಿ ಫೋರ್, ಸಿಕ್ಸ್, ಬಾರಿಸುವ ಮೂಲಕ ರನ್ ಗತಿಯನ್ನು ಹೆಚ್ಚಿಸಿದರು.

ಇನ್ನೊಂದೆಡೆ ನಾಯಕ ರಾಹುಲ್ ಕೂಡ ಬಿರುಸಿನ ಆಟ ಆಡಿದರು. ಪರಿಣಾಮ ಪವರ್ಪ್ಲೇ ಮುಕ್ತಾಯದ ವೇಳೆಗೆ ಕಿಂಗ್ಸ್ ಇಲೆವೆನ್ ತಂಡದ ಮೊತ್ತ 53 ಕ್ಕೆ ಬಂದು ನಿಂತಿತು. ಅಲ್ಲದೆ ಆರಂಭಿಕ ಆಘಾತದಿಂದ ತಂಡವನ್ನು ಪಾರು ಮಾಡಿದ ಈ ಜೋಡಿ ಮೊದಲ ಹತ್ತು ಓವರ್ ಮುಕ್ತಾಯಕ್ಕೆ 81 ರನ್ ಪೇರಿಸಿತು. ಇದರ ಬೆನ್ನಲ್ಲೇ ಕ್ರಿಸ್ ಗೇಲ್ ಭರ್ಜರಿ ಸಿಕ್ಸರ್ನೊಂದಿಗೆ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ವೇಳೆಗೆ ಯುನಿವರ್ಸ್ ಬಾಸ್ ಬ್ಯಾಟ್ನಿಂದ 4 ಸಿಕ್ಸರ್ ಹಾಗೂ 4 ಬೌಂಡರಿಗಳು ಮೂಡಿ ಬಂದಿದ್ದವು.

16 ಓವರ್ ಮುಕ್ತಾಯದ ವೇಳೆಗೆ ಕಿಂಗ್ಸ್ ಇಲೆವೆನ್ ಪಂಜಾಬ್ 137 ರನ್ಗಳಿಸಿತು. ಅಂತಿಮ ಓವರ್ಗಳಲ್ಲಿ ಆರ್ಭಟಿಸಲು ಆರಂಭಿಸಿದ ಪೂರನ್-ಗೇಲ್ ಸಿಕ್ಸ್, ಫೋರ್ಗಳ ಮೂಲಕ ರನ್ ಗತಿಯನ್ನು ಹೆಚ್ಚಿಸಿದರು.

ಈ ಮಧ್ಯೆ 99 ರನ್ ಗಳಿಸಿದ್ದ ಕ್ರಿಸ್ ಗೇಲ್, ಆರ್ಚರ್ ಬೌಲಿಂಗ್ನಲ್ಲಿ ಬೋಲ್ಡ್ ಆದರು. ಈ ವೇಳೆ ಬೇಸರ ಹಾಗು ಸಿಟ್ಟಿನಿಂದ ಕ್ರಿಸ್ಗೇಲ್ ಬ್ಯಾಟ್ ಬೀಸಿ ಎಸೆದರು. ಸಿಟ್ಟಿನಿಂದ ಎಸೆದ ಬ್ಯಾಟ್ ದೂರ ಹೋಗಿ ಬಿದ್ದಿತ್ತು. ಈ ವಿಡಿಯೋ ವೈರಲ್ ಆಗಿದ್ದು, ನಿಯಮ ಉಲ್ಲಂಘಿಸಿದ್ದ ಕಾರಣ ಕ್ರಿಸ್ ಗೇಲ್ ಗೆ ದಂಡ ಹಾಕಲಾಗಿದೆ. ಮ್ಯಾಚ್ ಸಂಭಾವನೆಯ ಶೇ.10ರನ್ನು ದಂಡವಾಗಿ ನೀಡುವಂತೆ ಐಪಿಎಲ್ ಮಂಡಳಿ ಸೂಚಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments