Tuesday, June 15, 2021
No menu items!
Home Karnataka ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಸಂಬಂಧವಿಲ್ಲ: ಸಿಎಂ ಸ್ಪಷ್ಟನೆ

ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಸಂಬಂಧವಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ ವ್ಯಕ್ತವಾಗಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ಆ ಬಗ್ಗೆ ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ ಎಂದು ಟ್ವೀಟ್ ಮೂಲಕ ಸಮಾಜಾಯಿಷಿ ನೀಡಿದ್ದಾರೆ. ಈ ಮೂಲಕ ತಮ್ಮ ಈ ನಿರ್ಧಾರವನ್ನು ವಾಪಸ್ಸು ಪಡೆಯುವುದಿಲ್ಲ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ’ಗೆ ಸರ್ಕಾರ ಮುಂದಾಗಿದ್ದ ಕ್ರಮಕ್ಕೆ ರಾಜ್ಯದೆಲ್ಲೆಡೆ ಪ್ರತಿಭಟನೆ ವ್ಯಕ್ತವಾಗಿದೆ. ಮುಖ್ಯಮಂತ್ರಿಗಳು ಚುನಾವಣೆ ಹಿನ್ನಲೆ ಮರಾಠಿಗರ ಒಲೈಕೆಗೆ ಮುಂದಾಗಿದ್ದಾರೆ. ಈ ಮೂಲಕ ಕನ್ನಡ ಭಾಷೆಗೆ ದ್ರೋಹ ಮಾಡುತ್ತಿದ್ದಾರೆ ಎಂದು ವಿವಿಧ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದವು. ಅಲ್ಲದೇ ಇಂದು ಕೆಲ ಕರವೇ ಕಾರ್ಯಕರ್ತರು ಮುಖ್ಯಮಂತ್ರಿ ನಿವಾಸದ ಮುಂದೆ ಪ್ರತಿಭಟನೆ ನಡೆಸುವ ವಿಫಲ ಯತ್ನ ನಡೆಸಿದರು. ರಾಜ್ಯಾದ್ಯಾಂತ ವ್ಯಕ್ತವಾಗುತ್ತಿರುವ ಈ ಪ್ರತಿಭಟನೆ ಹಿನ್ನಲೆ ಈ ಕುರಿತು ಸಿಎಂ ಸ್ಪಷ್ಟನೆ ನೀಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments