Wednesday, October 27, 2021
No menu items!
Home Karnataka ದೊಡ್ಡ ಕಚೇರಿಯಲ್ಲಿ ಕುಳಿತು ರಿಲ್ಯಾಕ್ಸ್ ಮಾಡಬೇಡಿ: ಗೃಹಸಚಿವ ಬಸವರಾಜ ಬೊಮ್ಮಾಯಿ

ದೊಡ್ಡ ಕಚೇರಿಯಲ್ಲಿ ಕುಳಿತು ರಿಲ್ಯಾಕ್ಸ್ ಮಾಡಬೇಡಿ: ಗೃಹಸಚಿವ ಬಸವರಾಜ ಬೊಮ್ಮಾಯಿ

ಮೈಸೂರು: ಮೈಸೂರು ನಗರದ ನೂತನ ಪೊಲೀಸ್ ಕಮಿಷನರ್ ಕಚೇರಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಟೇಪ್ ಕತ್ತರಿಸುವ ಮೂಲಕ ಇಂದು ಲೋಕಾರ್ಪಣೆ ಮಾಡಿದರು. ನಜರಬಾದ್ ನಲ್ಲಿ ನಿರ್ಮಾಣಗೊಂಡಿರುವ ಈ ನೂತನ ಪೊಲೀಸ್ ಕಮಿಷನರ್ ಕಚೇರಿಗೆ 19.36 ಕೋಟಿ ರೂ. ವೆಚ್ಚ ತಗುಲಿದೆ. ಕಮಿಷನರ್ ಕಟ್ಟಡದ ಜೊತೆ 108 ವಸತಿ ಗೃಹಗಳ ಉದ್ಘಾಟನೆ ಸಹ ನೆರವೇರಿಸಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮೈಸೂರು ನಗರ ಕಮಿಷನರ್ ಕಚೇರಿ ಕಟ್ಟಡ ಭವ್ಯವಾಗಿದೆ. ಈ ರೀತಿಯಾದ ಕಟ್ಟಡ ಪೊಲೀಸ್ ಇಲಾಖೆಗೆ ರಾಜ್ಯದಲ್ಲೆಲ್ಲಿಯೂ ಇಲ್ಲ. ದೊಡ್ಡ ಕಛೇರಿ ಎಂದು ರಿಲ್ಯಾಕ್ಸ್ ಮಾಡುತ್ತಾ ಕಚೇರಿಯಲ್ಲಿಯೇ ಕೂರಬೇಡಿ. ನಿಮ್ಮ ಅವಶ್ಯಕತೆ ಮೈಸೂರು ನಗರಕ್ಕೆ ಹೆಚ್ಚಿದೆ ಎಂದು ನಗರ ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತರಿಗೆ ಕಿವಿಮಾತು ಹೇಳಿದರು.

ಕರ್ನಾಟಕದಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಿವೆ. ರಾಜ್ಯ ಸರ್ಕಾರ ಡ್ರಗ್ಸ್ ವಿರುದ್ಧ ಸಮರವನ್ನೇ ಸಾರಿದ್ದೇವೆ. ತಂತ್ರಜ್ಞಾನ ಬೆಳದಂತೆ ಸೈಬರ್ ಕ್ರೈಂ ಕೂಡ ಹೆಚ್ಚಾಗುತ್ತಿವೆ. ದೇಶದಲ್ಲೇ ಕರ್ನಾಟಕ ಪೊಲೀಸ್ ದಕ್ಷತೆಗೆ ಹೆಸರುವಾಸಿಯಾಗಿದೆ. ಪೊಲೀಸ್ ಇಲಾಖೆಯಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಿ ಇಲಾಖೆಗೆ ಅಗತ್ಯ ಸೌಲಭ್ಯಗಳನ್ನು ನೀಡಲಾಗುವುದು. ದೊಡ್ಡ ಕಚೇರಿ ಎಂದು ಕುಳಿತು ರಿಲ್ಯಾಕ್ಸ್ ಮಾಡಬೇಡಿ ಎಂದು ಗೃಹ ಸಚಿವ ಬೊಮ್ಮಾಯಿ ತಿಳಿಸಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments