Tuesday, October 26, 2021
No menu items!
Home Latest ಸಿಎಂ ಮಾಧ್ಯಮ ಸಲಹೆಗಾರ ಮಹಾದೇವ್ ಪ್ರಕಾಶ್ ದಿಢೀರ್ ರಾಜೀನಾಮೆ

ಸಿಎಂ ಮಾಧ್ಯಮ ಸಲಹೆಗಾರ ಮಹಾದೇವ್ ಪ್ರಕಾಶ್ ದಿಢೀರ್ ರಾಜೀನಾಮೆ

ಬೆಂಗಳೂರು:ಅಚ್ಚರಿಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಮಹಾದೇವ್ ಪ್ರಕಾಶ್ ದಿಢೀರ್ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಮಹಾದೇವ್” ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ.ಕಳೆದ ಒಂದು ವರ್ಷದಿಂದ ಕಾರ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಹೃದಯಪೂರ್ವಕ ಧನ್ಯವಾದಗಳು” ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಮಹದೇವ ಪ್ರಕಾಶ್ ಅವರ ರಾಜೀನಾಮೆಗೆ ನಿಜವಾದ ಕಾರಣ ಏನು ಎನ್ನುವುದು ಮಾತ್ರ ಇನ್ನೂ ಸರಿಯಾಗಿ ತಿಳಿದು ಬಂದಿಲ್ಲ.ಆದರೆ ಪತ್ರದಲ್ಲಿ ವೈಯಕ್ತಿಕ ಕಾರಣದಿಂದಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.ಕೆಲ ದಿನಗಳ ಹಿಂದೆಯಷ್ಟೇ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಎಂ.ಬಿ.ಮರಮಕಲ್‌ ಅವರ ನೇಮಕಾತಿ ರದ್ದು ಮಾಡಲಾಗಿತ್ತು. ಇದೀಗ ಮಹದೇವ ಪ್ರಕಾಶ್ ಅವರು ರಾಜೀನಾಮೆ ನೀಡಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ನಂತರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಾಗಿ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ನೇಮಕಗೊಂಡಿದ್ದರು.ಇದೀಗ ಮಹದೇವ್ ಪ್ರಕಾಶ್ ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿರುವುದು ಅಚ್ಚರಿ ತಂದಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments