Tuesday, October 26, 2021
No menu items!
Home Karnataka ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ..!

ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ..!

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡಾಲರ್ಸ್ ಕಾಲೊನಿಯಲ್ಲಿರಯವ ತಮ್ಮ ನಿವಾಸದಲ್ಲಿ ಸಂತೋಷ್ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಇದು ಕುಟುಂಬದ ಸದ್ಯಸರ ಗಮನಕ್ಕೆ ಬಂದ ತಕ್ಷಣ ಅವರನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ವಿಚಾರವಾಗಿ ತನಿಖೆ ಶುರು ಮಾಡಿರುವ ಪೊಲೀಸ್ ಮೂಲಗಳು ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ತಿಳಿಸಿವೆ. ಇನ್ನೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ ಸಂತೋಷ್ ಗೆ ರಾಜಕೀಯ ಒತ್ತಡವಿತ್ತು ಎಂದು ಹೇಳಲಾಗುತ್ತಿದೆ. ಇದೆ ಕಾರಣಕ್ಕೆ ಅವರು ಆತ್ಮಹತ್ಯೆ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಸಂತೋಷ್ ಅವರ ಆತ್ಮಹತ್ಯೆ ಯತ್ನಕ್ಕೆ ಕಾರಣ ಏನೆಂದು ತಿಳಿದುಬಂದಿಲ್ಲ. ಅವರು ನಿದ್ರೆ ಮಾತ್ರೆ ಸೇವಿಸಿದ್ದರಿಂದ ಪ್ರಜ್ಞಾಹೀನ ಸ್ಥಿತಿಗೆ ಹೋಗಿದ್ದಿರಿರುವ ಶಂಕೆ ಇದೆ. ಸದಾಶಿವನಗರ ಮತ್ತು ಸಂಜಯನಗರ ಠಾಣೆಗಳ ಪೊಲೀಸರು ರಾಮಯ್ಯ ಆಸ್ಪತ್ರೆ ಬಳಿ ಪರಿಶೀಲನೆ ನಡೆಸಿದ್ದಾರೆ.

ಅಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವುದು ಕಾನೂನು ಬಾಹಿರವಾಗಿದೆ. ಅದಕ್ಕಾಗಿ ಸಂತೋಷ ವಿರುದ್ದ ಮೇಲೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 309 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಜೊತೆಗೆ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂಬ ಒತ್ತಡ ಕೇಳಿ ಬಂದಿತ್ತು ಎಂದು ಹೇಳಲಾಗುತ್ತಿದೆ. ರಾಜಕೀಯ ಒತ್ತಡದ ಕಾರಣದಿಂದಾಗಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ಕೂಡ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದ್ದಾರೆ. ಶುಕ್ರವಾರ ಬೆಳಗ್ಗೆ ನನ್ನ ಜೊತೆ ಮುಕ್ಕಾಲು ಗಂಟೆ ವಾಕ್ ಮಾಡಿದ್ದ. ಖುಷಿ ಖುಷಿಯಾಗಿ ನಗುನಗುತ್ತ ಚೆನ್ನಾಗಿ ಇದ್ದ ಎಂದು ಹೇಳಿದ ಯಡಿಯೂರಪ್ಪ, ಅವನ ಪತ್ನ ಜೊತೆ ನಾನು ಮಾತಾಡಿದೀನಿ, ಯಾವುದೇ ಆತಂಕ ಇಲ್ಲ. ಬೆಳಗ್ಗೆ ಎದ್ದು ಓಡಾಡುತ್ತಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments