Monday, September 27, 2021
No menu items!
Home Bharata ಜನವರಿ 1ರಿಂದ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ..

ಜನವರಿ 1ರಿಂದ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ..

ದೆಹಲಿ: 1989 ರ ಕೇಂದ್ರ ಮೋಟಾರು ವಾಹನ ನಿಯಮಗಳ ತಿದ್ದುಪಡಿಗಳ ಮೂಲಕ, 2021 ರ ಜನವರಿ 1 ರಿಂದ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

2017 ಡಿಸೆಂಬರ್ 1, ರ ನಂತರ ಮಾರಾಟವಾದ ನಾಲ್ಕು ಚಕ್ರಗಳು ಮತ್ತು ಎಂ ಎನ್ ವರ್ಗದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯವಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ (ನ.7) ತಿಳಿಸಿದೆ.

ಸಾರಿಗೆ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಅಳವಡಿಸಿದ ನಂತರವೇ ಫಿಟ್‌ನೆಸ್ ಪ್ರಮಾಣಪತ್ರವನ್ನು ನವೀಕರಿಸಲಾಗುತ್ತದೆ ಹಾಗೂ ಮೂರನೇ ವ್ಯಕ್ತಿ ವಿಮೆಗಾಗಿ ಮಾನ್ಯ ಫಾಸ್ಟ್ ಟ್ಯಾಗ್ ಅನ್ನೇ ಬಳಸಬೇಕು ಇದು ಏಪ್ರಿಲ್ 1, 2021 ರಿಂದ ಅನ್ವಯವಾಗಲಿದೆ ಎಂದು ಹೇಳಿದೆ.

ಕೇಂದ್ರ ಮೋಟಾರು ವಾಹನ ಕಾಯ್ದೆ 1981ರ ತಿದ್ದುಪಡಿಯಂತೆ 2017ರ ಡಿಸೆಂಬರ್ 1ಕ್ಕೆ ಮುನ್ನ ಮಾರಾಟವಾಗಿರುವ ಎಲ್ಲಾ ‘ಎಂ’ ಮತ್ತು ‘ಎನ್’ ವರ್ಗದ ಹಳೆಯ ಮೋಟಾರು ವಾಹನ ಗಳಿಗೂ(ದ್ವಿಚಕ್ರ ವಾಹನಗಳಿಗೆ) ಫಾಸ್ಟ್ ಟ್ಯಾಗ್ ಕಡ್ಡಾಯವಾಗಿದೆ. ಈ ಕುರಿತಂತೆ ಸಚಿವಾಲಯ 2020ರ ನವೆಂಬರ್ 6ರಂದು ಜಿಎಸ್ಆರ್ 690(ಇ) ಅಧಿಸೂಚನೆಯನ್ನು ಹೊರಡಿಸಿತ್ತು.

ಜೊತೆಗೆ 2019ರ ಅಕ್ಟೋಬರ್ 1ರಿಂದೀಚೆಗೆ ರಾಷ್ಟ್ರೀಯ ಪರ್ಮಿಟ್ ಹೊಂದಿರುವ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ.

ಅರ್ಜಿ ನಮೂನೆ ಸಂಖ್ಯೆ 51(ವಿಮಾ ಪ್ರಮಾಣಪತ್ರ)ಕ್ಕೆ ತಿದ್ದುಪಡಿ ತರಲಾಗಿದ್ದು, ಆ ಮೂಲಕ ಹೊಸದಾಗಿ ಮೂರನೇ ವ್ಯಕ್ತಿ ವಿಮೆಯನ್ನು ಪಡೆಯಬೇಕಾದರೆ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯವಾಗಿದ್ದು,ಅದರಲ್ಲಿ ಫಾಸ್ಟ್ ಟ್ಯಾಗ್ ವಿವರಗಳನ್ನು ಸೆರೆಹಿಡಿಯಲಾಗುವುದು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments