ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ ಕಳೆದ 24 ಗಂಟೆಯಲ್ಲಿ ಸುಮಾರು 2154 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಇಂದು 26,646 ರ್ಯಾಪಿಡ್ ಟೆಸ್ಟ್, 89,226ಆರ್ ಟಿ ಪಿ ಸಿ ಆರ್ ಸೇರಿದಂತೆ 1,15,872 ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅದರಲ್ಲಿ 2,154 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಬೆಂಗಳೂರು ನಗರದಲ್ಲಿ ಇಂದು 1195 ಪ್ರಕರಣಗಳು ದೃಢಪಟ್ಟಿವೆ. ಉಳಿದಂತೆ ಮೈಸೂರಿನಲ್ಲಿ 137, ಹಾಸನದಲ್ಲಿ 103 ಪ್ರಕರಣಗಳು ವರದಿಯಾಗಿವೆ. ಬೀದರ್ನಲ್ಲಿ ಅತಿ ಕಡಿಮೆ, 3 ಪ್ರಕರಣಗಳು ವರದಿಯಾಗಿವೆ. ಬಾಗಲಕೋಟೆ 8, ಬಳ್ಳಾರಿ 34, ಬೆಳಗಾವಿ 51, ಬೆಂಗಳೂರು ಗ್ರಾಮಾಂತರ 60, ಚಾಮರಾಜನಗರ 14, ಚಿಕ್ಕಬಳ್ಳಾಪುರ 21, ಚಿಕ್ಕಮಗಳೂರು 17, ಚಿತ್ರದುರ್ಗ 24, ದಕ್ಷಿಣ ಕನ್ನಡ 40, ದಾವಣಗೆರೆ 29, ಧಾರವಾಡ 12, ಗದಗ 11, ಹಾವೇರಿ 20, ಕಲಬುರಗಿ 15, ಕೊಡಗು 20, ಕೋಲಾರ 39, ಕೊಪ್ಪಳ 13, ಮಂಡ್ಯ 46, ರಾಯಚೂರು 19, ರಾಮನಗರ 11, ಶಿವಮೊಗ್ಗ 38, ತುಮಕೂರು 61, ಉಡುಪಿ 27, ಉತ್ತರ ಕನ್ನಡ 42, ವಿಜಯಪುರ 33 ಮತ್ತು ಯಾದಗಿರಿ ಜಿಲ್ಲೆಯಲ್ಲಿ 11 ಪ್ರಕರಣಗಳು ದಾಖಲಾಗಿವೆ.
ಇಂದು ಒಟ್ಟು 17 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 11508ಕ್ಕೆ ಏರಿಕೆಯಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿ 9 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಒಟ್ಟು ಕೋವಿಡ್ ಸಾವಿನ ಸಂಖ್ಯೆ 3997ಕ್ಕೆ ತಲುಪಿದೆ.
2198 ಮಂದಿ ಇಂದು ಕೊರೊನಾದಿಂದ ಗುಣಮುಖರಾಗಿ ಮನೆಗೆ ತಲುಪಿದ್ದಾರೆ.