ಕರ್ನಾಟಕದಲ್ಲಿ ಇಂದು 7184 ಜನರಿಗೆ ಸೋಂಕು ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7,51,032 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 3371 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 3,04,005 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 71 ಮಂದಿ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 10,427 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 14 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 3500 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 64770 ಮಂದಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇಂದು 211 ಮಂದಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ. ಪಾಸಿಟಿವ್ ಬಂದವರಲ್ಲಿ ಮಕ್ಕಳು ಸೇರಿದಂತೆ 106 ಮಂದಿ ಪುರುಷರು ಹಾಗೂ 105 ಮಂದಿ ಮಹಿಳೆಯರಾಗಿದ್ದಾರೆ. ಇವರಲ್ಲಿ 82 ಪುರುಷರು ಹಾಗೂ 94 ಮಂದಿ ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನಲ್ಲಿ 62, ಕುಂದಾಪುರ ತಾಲೂಕಿನಲ್ಲಿ 95 ಹಾಗೂ ಕಾರ್ಕಳ ತಾಲೂಕಿನಲ್ಲಿ 46 ಮಂದಿಗೆ ಪಾಸಿಟಿವ್ ಬಂದಿದೆ. ಉಳಿದ ಎಂಟು ಮಂದಿ ಹೊರಜಿಲ್ಲೆಗಳಿಂದ ಚಿಕಿತ್ಸೆಗೆಂದು ಬಂದು ಇಲ್ಲಿ ಪಾಸಿಟಿವ್ ಬಂದವರಾಗಿದ್ದಾರೆ. ದಿನದಲ್ಲಿ ಪಾಸಿಟಿವ್ ಬಂದ 211 ಮಂದಿಯಲ್ಲಿ 30 ಮಂದಿಯನ್ನು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಉಳಿದ 181 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್ಓ ಡಾ.ಸೂಡ ತಿಳಿಸಿದರು.
ಕುಂದಾಪುರದ 57 ವರ್ಷ ಪ್ರಾಯದ ಮಹಿಳೆ ಇಂದು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಉಳಿದಂಥೆ ಇಂದು ಒಟ್ಟು 169 ಮಂದಿ ಸೋಂಕಿನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಒಟ್ಟು 18,578 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.