Monday, June 14, 2021
No menu items!
Home Karnataka 'ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ'

‘ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ’

ಮೈಸೂರು: ದೀಪಾವಳಿ ಹಬ್ಬ ಮುಗಿದ ಮಾರನೇ ದಿನವೇ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ. ನವೆಂಬರ್ 17 ರಿಂದ ಕಾಲೇಜುಗಳು ಆರಂಭವಾಗುತ್ತಿದ್ದು, ಕೊವಿಡ್ ಟೆಸ್ಟ್ ಕಡ್ಡಾಯವಾಗಿದೆ.

ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ನೆಗೆಟಿವ್ ರಿಪೋರ್ಟ್ ಬಂದರೆ ಮಾತ್ರ ತರಗತಿಗೆ ಹಾಜರಾಗುವ ಅವಕಾಶ ಇರುತ್ತದೆ ಎಂದು ಮೈಸೂರು ವಿವಿಯ ಕುಲಸಚಿವ ಆರ್.ಶಿವಪ್ಪ ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಮೈಸೂರು ವಿವಿ ವ್ಯಾಪ್ತಿಯಲ್ಲಿ ಬರುವ 231 ಡಿಗ್ರಿ ಕಾಲೇಜುಗಳಲ್ಲಿ ಅಂತಿಮ ವರ್ಷದ ಡಿಗ್ರಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಲಿವೆ. ತರಗತಿಗೆ ಬರುವ ಮುನ್ನ ಕೋವಿಡ್ ಟೆಸ್ಟ್ ವರದಿ ತರಬೇಕು. ನೆಗೆಟಿವ್ ಇದ್ದರೆ ಮಾತ್ರ ತರಗತಿಗೆ ಪ್ರವೇಶವಿದ್ದು, ಇದರ ಜೊತೆಗೆ ತಂದೆ-ತಾಯಿಗಳಿಂದ ಒಪ್ಪಿಗೆ ಪತ್ರವನ್ನು ಸಹ ತರಬೇಕು. ಈ ಬಗ್ಗೆ ಈಗಾಗಲೇ ಕಾಲೇಜಿನ ಪ್ರಾಂಶುಪಾಲರನ್ನು ಕರೆಸಿ ತಿಳಿಸಲಾಗಿದೆ ಎಂದರು.

ವಿವಿ ವ್ಯಾಪ್ತಿಯಲ್ಲಿ ಬರುವ 4 ಸ್ನಾತಕೋತ್ತರ ಕೇಂದ್ರಗಳು ಹಾಗೂ 40 ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಿಮ‌ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸಹ ಕೋವಿಡ್ ಟೆಸ್ಟ್​ಗೆ ಒಳಗಾಗಬೇಕು ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳಿಗೆ ತರಗತಿಗೆ ಬರಲು ಕಡ್ಡಾಯ ಆದೇಶ ಇಲ್ಲ ಎಂದ ಅವರು, ಪ್ರಥಮ, ದ್ವೀತಿಯ ಪದವಿ ತರಗತಿಗೆ ಆನ್​ಲೈನ್ ಮೂಲಕ ತರಗತಿ ಆರಂಭವಾಗಲಿದೆ ಎಂದಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments