Tuesday, August 3, 2021
No menu items!
Home Karavali ಕಾಸರಗೋಡು ಜಿಲ್ಲೆಯ ಗಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಪುನರಾರಂಭ

ಕಾಸರಗೋಡು ಜಿಲ್ಲೆಯ ಗಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಪುನರಾರಂಭ

ಕಾಸರಗೋಡು: ಕಾಸರಗೊಡು ಜಿಲ್ಲೆಯ ಗಡಿ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ಪುನರಾರಂಭಿಸಲು ಜಿಲ್ಲಾ ಮಟ್ಟದ ಕೊರೋನಾ ಕೋರ್ ಸಮಿತಿ ಸಭೆ ತೀರ್ಮಾನಿಸಿದೆ. ವೀಡಿಯೋ ಕಾನ್ ಫೆರೆನ್ಸ್ ಮೂಲಕ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಹೈಕೋರ್ಟ್ ತೀರ್ಪಿನ ಪ್ರಕಾರ ಕೋವಿಡ್ ನಿರ್ಮೂಲನ ಉದ್ದೇಶದ ತಪಾಸಣೆ ಈ ವೇಳೆ ನಡೆಯಲಿದೆ. ಆದರೆ ಗಡಿ ಪ್ರದೇಶದಲ್ಲಿ ಯಾರಿಗೂ ತಡೆಮಾಡುವುದಿಲ್ಲ. ಬ್ಯಾರಿಕೇಡ್ ಸ್ಥಾಪಿಸಿ ಸಂಚಾರವನ್ನೂ ಮೊಟಕುಗೊಳಿಸುವುದಿಲ್ಲ. ಈ ಸಂಬಂಧ ಪ್ರತ್ಯೇಕ ಪಾಸ್ ವ್ಯವಸ್ಥೆಯನ್ನೂ ಏರ್ಪಡಿಸುವುದಿಲ್ಲ. ಇತರ ರಾಜ್ಯಗಳಿಂದ ಕಾಸರಗೋಡು ಜಿಲ್ಲೆಗೆ ಆಗಮಿಸುವವರು ಕೋವಿಡ್ 19 ಜಾಗ್ರತಾ ವೆಬ್ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ನೋಂದಣಿ ನಡೆಸಬೇಕು. ಈ ಸಂಬಂಧ ಖಚಿತತೆಗಾಗಿ ತಪಾಸಣೆ ನಡೆಯಲಿದೆ. ಇಲ್ಲಿ ಕೋವಿಡ್ ತಪಾಸಣೆ ಸೌಲಭ್ಯವೂ ಇರುವುದು.

ತಲಪಾಡಿ ಚೆಕ್ ಪೋಸ್ಟ್‌ನಲ್ಲಿ ಪೊಲೀಸ್, ಕಂದಾಯ, ಆರೋಗ್ಯ ಇಲಾಖೆಗಳ ಸಿಬ್ಬಂದಿ ನಡೆಸುತ್ತಿರುವ ತಪಾಸಣೆ ಗಡಿ ಪ್ರದೇಶಗಳ 16 ರಸ್ತೆಗಳಲ್ಲೂ ಪುನರಾರಂಭಗೊಳ್ಳಲಿದೆ. ಪೊಲೀಸರಲ್ಲದೆ, ಅರಣ್ಯ, ಅಗ್ನಿಶಾಮಕದಳ, ಅಬಕಾರಿ ಇಲಾಖೆಗಳ ಸಮವಸ್ತ್ರಧಾರಿ ಸಿಬ್ಬಂದಿ ಕರ್ತವ್ಯದಲ್ಲಿರುವರು. ಇಡುಕ್ಕಿ, ವಯನಾಡ್, ತಿರುವನಂತಪುರಂ ಜಿಲ್ಲೆಗಳ ಗಡಿಪ್ರದೇಶಗಳನ್ನು ಈವರೆಗೆ ಮುಕ್ತಗೊಳಿಸಿಲ್ಲ. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹೈಕೋರ್ಟ್ ತೀರ್ಪು ಪ್ರಕಾರ ಕೋವಿಡ್ ರೋಗ ಹೆಚ್ಚಳ ನಿಯಂತ್ರಣ ನಿಟ್ಟಿನಲ್ಲಿ ಆಗಮಿಸುವವರ ತಪಾಸಣೆ ನಡೆಸಲಾಗುವುದು. ವಾರದ ಎಲ್ಲ ದಿನಗಳಲ್ಲೂ 24 ತಾಸುಗಳೂ ತಪಾಸಣೆ ನಡೆಯಲಿದೆ.

ಕೋವಿಡ್ ತಪಾಸಣೆ ಹೆಚ್ಚಳ: ಕಾಸರಗೊಡು ಜಿಲ್ಲೆಯಲ್ಲಿ ಕೋವಿಡ್ ತಪಾಸಣೆ ಹೆಚ್ಚಳಗೊಳಿಸಲಾಗುವುದು. ಈಗ ಜಿಲ್ಲೆಯಲ್ಲಿ ಕೋವಿಡ್ ರೋಗಲಕ್ಷಣವಿರುವ ಎಲ್ಲ ಮಂದಿಯನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಪ್ರತಿದಿನ 1700 ರಿಂದ 2 ಸಾವಿರ ಮಂದಿಯ ತಪಾಸಣೆ ನಡೆಸಲಾಗುತ್ತಿದೆ. ಮುಂದೆ 3 ಸಾವಿರ ಮಂದಿಯನ್ನು ತಪಾಸಣೆಗೊಳಪಡಿಸಲು ರಾಜ್ಯ ಸರಕಾರ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ದಂತವೈದ್ಯರನ್ನು, ದಾದಿಯರನ್ನು ಗಡಿ ಚೆಕ್ ಪೋಸ್ಟ್‌ಗಳಲ್ಲಿ ಕರ್ತವ್ಯದಲ್ಲಿ ನೇಮಿಸಿ ತಪಾಸಣೆ ನಡೆಸಲು ಕೊರೋನಾ ಕೋರ್ ಸಮಿತಿ ಸಭೆ ತೀರ್ಮಾನಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments