Saturday, December 4, 2021
No menu items!
Home Entertainment ( Kan ) ಪ್ರೀತಿಯ ಅಪ್ಪಾಜಿಯನ್ನು ನೆನೆದ ದರ್ಶನ್

ಪ್ರೀತಿಯ ಅಪ್ಪಾಜಿಯನ್ನು ನೆನೆದ ದರ್ಶನ್

ಬೆಂಗಳೂರು: ಮಂಡ್ಯದ ಗಂಡು, ರೆಬೆಲ್ ಸ್ಟಾರ್ ಅಂಬರೀಶ್ ನಮ್ಮನಗಲಿ ಇಂದಿಗೆ ಎರಡು ವರ್ಷಗಳು ಕಳೆದಿವೆ. ಈ ಸಂದರ್ಭ ಅಂಬಿ ಸಮಾಧಿಗೆ ಪತ್ನಿ ಸುಮಲತಾ ಅಂಬರೀಶ್ ಬೆಳಗ್ಗೆ 9 ಗಂಟೆ ಸುಮಾರಿಗೆ ಆಗಮಿಸಿದ್ದಾರೆ. ಸುಮಲತಾ ಅಂಬರೀಶ್ ಜೊತೆ ಪುತ್ರ ಅಭಿಷೇಕ್ ಕೂಡ, ತಮ್ಮ ತಂದೆಯ ಎರಡನೇ ಪುಣ್ಯತಿಥಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಇನ್ನು, ಇವರ ಜೊತೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಜೈ ಜಗದೀಶ್, ವಿಜಯಲಕ್ಷ್ಮಿ ಸಿಂಗ್ ಅಂಬಿ ಸಮಾಧಿಗೆ ಭೇಟಿ ನೀಡಿದ್ದಾರೆ.

ದರ್ಶನ್ ಅವರನ್ನು ಅಂಬರೀಷ್ ದೊಡ್ಡ ಮಗನಂತೆ ನೋಡಿಕೊಳ್ಳುತ್ತಿದ್ದರು. ದರ್ಶನ್ ಸಹ ಅಂಬಿಯನ್ನು ಅಪ್ಪಾಜಿ ಎಂದೇ ಕರೆಯುತ್ತಿದ್ದರು. ಕೇವಲ ಮಾತಿಗೆ ಅಪ್ಪಾಜಿ ಎಂದು ಹೇಳದೆ, ಮಾತಿನಂತೆಯೇ ಅಂಬಿಗೆ ತಂದೆಯ ಸ್ಥಾನ ಕೊಟ್ಟಿದ್ದರು ದರ್ಶನ್. ಅಂಬಿ ಅಗಲಿದಾಗ ದರ್ಶನ್ ವಿದೇಶದಲ್ಲಿ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು. ವಿಷಯ ತಿಳಿದ ತಕ್ಷಣ ಮರಳಿದ ದಚ್ಚು, ಮುಂದೆ ನಿಂತು ತಮ್ಮ ಜವಾಬ್ದಾರಿ ನಿರ್ವಹಿಸಿದ್ದರು.

ನನ್ನ ಪ್ರೀತಿಯ ಸೀನಿಯರ್ ಅಂಬಿ ಅಪ್ಪಾಜಿ ಇಂದಿಗೆ ದೈಹಿಕವಾಗಿ ಅಗಲಿ ೨ ಸಂವತ್ಸರಗಳು ಕಳೆದಿವೆ. ಆದರೆ ನಮ್ಮೆಲರ ಮನಗಳಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಅವರ ನೇರನುಡಿಯ ವ್ಯಕ್ತಿತ್ವ, ಮಾಡಿರುವ ಸಹೃದಯಿ ಕಾರ್ಯಗಳು ಸದಾ ಕನ್ನಡಿಗರ ಮನಸ್ಸಲ್ಲಿ ಜೀವಂತವಾಗಿರುತ್ತವೆ ಎಂದು ಟ್ವೀಟ್ ಮಾಡುವ ಮೂಲಕ ಅಂಬಿಯನ್ನು ನೆನೆದಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments