Thursday, September 16, 2021
No menu items!
Home Karnataka ಮಾನವೀಯತೆ ಆಧಾರದ ಮೇಲೆ ಪ್ರಚಾರಕ್ಕೆ ಹೊರಟೆ : ನಟ ದರ್ಶನ್

ಮಾನವೀಯತೆ ಆಧಾರದ ಮೇಲೆ ಪ್ರಚಾರಕ್ಕೆ ಹೊರಟೆ : ನಟ ದರ್ಶನ್

ಬೆಂಗಳೂರು : ನವೆಂಬರ್ 3 ರಂದು ಆರ್ ಆರ್ ನಗರ ಹಾಗೂ ತುಮಕೂರಿನ ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಬಹಿರಂಗ ಪ್ರಚಾರಕ್ಕೆ ಸಮಯ ಕಡಿಮೆ ಇದ್ದು, ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಶುರುವಾಗಿದೆ. ಈ ಹಿನ್ನೆಲೆ ಇಂದಿನಿಂದ ಆರ್ ಆರ್ ನಗರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುನಿರತ್ನ ಪರ ಪ್ರಚಾರ ಮಾಡಲು ಕಣಕ್ಕಿಳಿಯುತ್ತಿದ್ದಾರೆ.

ಮುನಿರತ್ನ ಗೆಲುವಿಗಾಗಿ ಬಿಜೆಪಿ ಪಕ್ಷದವರು ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಖುಷ್ಬೂ ಕೂಡ ಮೊನ್ನೆ ತಾನೇ ಆರ್ ಆರ್ ನಗರದಲ್ಲಿ ಮುನಿರತ್ನ ಪರ ಪ್ರಚಾರ ನಡೆಸಿದ್ದಾರೆ. ನಾಳೆಯಿಂದ ಸಿಎಂ ಯಡಿಯೂರಪ್ಪ ಕೂಡ ಆರ್ ಆರ್ ನಗರದಲ್ಲಿ ಪ್ರಚಾರ ನಡೆಸಲು ಬರುತ್ತಿದ್ದಾರೆ.

ದರ್ಶನ್ ಗೆ ರಾಕ್ ಲೈನ್ ವೆಂಕಟೇಶ್ ಕೂಡ ಸಾಥ್ ನೀಡುತ್ತಿದ್ದಾರೆ. ಈ ಬಗ್ಗೆ ಇಂದು ಮಾತನಾಡಿದ ದರ್ಶನ್, ಮುನಿರತ್ನ ಅವರಿಗೆ ಮಾನವೀಯತೆ ಹೆಚ್ಚಾಗಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಎಲ್ಲರಿಗೂ ಅಕ್ಕಿಯನ್ನು ವಿತರಿಸಿದ್ದಾರೆ. ಸಂಕಷ್ಟಕ್ಕೆ ನಿಂತವರ ಪರ ನಾನು ಪ್ರಚಾರ ಮಾಡುತ್ತೇನೆ. ಮಾನವೀಯತೆಯ ದೃಷ್ಟಿಯಿಂದಲೇ ನಾನು ಇಂದು ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದಿದ್ದಾರೆ.

ಕಳೆದ ಮೂರು ದಿನಗಳ ಹಿಂದೆಯೇ ದರ್ಶನ್ ಪ್ರಚಾರಕ್ಕೆ ಬರುತ್ತಾರೆ ಎನ್ನಲಾಗಿತ್ತು. ಆದ್ರೆ ಇಂದಿನಿಂದ ಅಧಿಕೃತವಾಗಿ ದರ್ಶನ್ ಪ್ರಚಾರಕ್ಕೆ ಇಳಿಯುತ್ತಿದ್ದಾರೆ. ಈಗಾಗಲೇ ಯಶವಂತಪುರ, ಆರ್ ಆರ್ ನಗರ ಕಡೆಗಳಲ್ಲಿ ದರ್ಶನ್ ನೋಡಲು ಅಭಿಮಾನಿಗಳು ನಟನನ್ನು ನೋಡಲು ಕಾಯುತ್ತಾ ಕುಳಿತಿದ್ದಾರೆ.

ಆರ್ ಆರ್ ನಗರ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆ ಬೀಳಲಿದೆ. ಈ ನಿಟ್ಟಿನಲ್ಲಿ ಅಭ್ಯರ್ಥಿಗಳ ಪರ ತಮ್ಮ ತಮ್ಮ ಪಕ್ಷದವರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಮುನಿರತ್ನ ಮೊದಲ ಬಾರಿಗೆ ಬಿಜೆಪಿಯಿಂದ ಚುನಾವಣೆ ಎದುರಿಸುತ್ತಿದ್ದಾರೆ. ಹೀಗಾಗಿ ಅಲ್ಲಿ ಗೆಲ್ಲಲೇ ಬೇಕಾಗಿದೆ. ಮುನಿರತ್ನಗೆ ಅದು ಪ್ರತಿಷ್ಠೆಯ ವಿಚಾರವಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments