Monday, September 27, 2021
No menu items!
Home Karnataka ದಸರಾ ಹಬ್ಬಕ್ಕೆ ಎಷ್ಟು ಮಂದಿ ಸೇರಬೇಕು ಗೊತ್ತಾ..? ಇಲ್ಲಿದೆ ನೋಡಿ ಮಾಹಿತಿ

ದಸರಾ ಹಬ್ಬಕ್ಕೆ ಎಷ್ಟು ಮಂದಿ ಸೇರಬೇಕು ಗೊತ್ತಾ..? ಇಲ್ಲಿದೆ ನೋಡಿ ಮಾಹಿತಿ

ಈ ಬಾರಿ ಕೊರೊನಾ ವೈರಸ್ ಹಾವಳಿಯಿಂದ ಲಕ್ಷಾಂತರ ಮಂದಿ ಸೇರುತ್ತಿದ್ದ, ಅದ್ದೂರಿಯ ದಸರಾ ಉತ್ಸವವನ್ನ ತುಂಬಾ ಸರಳವಾಗಿ ಆಚರಿಸಲಾಗುತ್ತಿದೆ. ಹೀಗಾಗಿ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಕೆಲವೊಂದು ನಿಯಮಗಳನ್ನು ಹಾಕಲಾಗಿದೆ.

ಅ. 17 ರಂದು ದಸರಾ ಉದ್ಘಾಟನಾ ಸಮಾರಂಭ ನಡೆಯಲಿದೆ. ಇದರಲ್ಲಿ ಗರಿಷ್ಠ 200 ಮಂದಿ ಮಾತ್ರ ಪಾಲ್ಗೊಳ್ಳಅವಕಾಶ ನೀಡಲಾಗಿದೆ. ಕರ್ತವ್ಯನಿರತ ಸಿಬ್ಬಂದಿ, ಕಲಾವಿದರು ಮತ್ತು ಮಾಧ್ಯಮದವರೂ ಒಳಗೊಂಡಂತೆ 200ಕ್ಕೂ ಹೆಚ್ಚು ಜನರು ಉದ್ಘಾಟನಾ ಕಾರ್ಯಕ್ರಮದಲ್ಲಿ ಇರಬಾರದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಹಾಗೆಯೇ, ಅ. 17 ರಿಂದ ಎಂಟು ದಿನ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ 50ಕ್ಕಿಂತ ಹೆಚ್ಚು ಮಂದಿ ಸೇರಬಾರದು. ಅಕ್ಟೋಬರ್ 26 ರಂದು ನಡೆಯುವ ಜಂಬೂ ಸವಾರಿಯಲ್ಲಿ 300 ಕ್ಕಿಂತ ಹೆಚ್ಚು ಮಂದಿಗೆ ಪ್ರವೇಶ ಇಲ್ಲ. ಅಕ್ಟೋಬರ್. 17 ರಿಂದ ಹತ್ತು ದಿನಗಳ ಕಾಲ ಸಂಜೆ 7 ರಿಂದ 9 ರವರೆಗೆ ಆಯ್ದ ಸ್ಥಳಗಳಲ್ಲಿ ದೀಪದ ವ್ಯವಸ್ಥೆ ಮಾಡಬೇಕು. ಈ ಸಂದರ್ಭದಲ್ಲಿ ಆ ಸ್ಥಳಗಳಲ್ಲಿ ಜನದಟ್ಟಣೆ ಸೇರದಂತೆ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ಆದೇಶ ನೀಡಲಾಗಿದೆ.


ದಸರಾ ಆಚರಣೆಯಲ್ಲಿ ಭಾಗವಹಿಸುವ ಕರ್ತವ್ಯನಿರತ ಸಿಬ್ಬಂದಿ, ಮಾಧ್ಯಮ ಮೊದಲಾದ ಪ್ರತಿಯೊಬ್ಬರೂ ಕೂಡ ಅ. 14 ರ ನಂತರ ಆರ್ಟಿಪಿಸಿಆರ್ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ನೆಗಟಿವ್ ಇರುವ ದಾಖಲಾತಿಯನ್ನು ಕಡ್ಡಾಯವಾಗಿ ತಂದಿರಬೇಕು. ದೈಹಿಕ ಅಂತರ, ಮುಖಗವಸು ಇತ್ಯಾದಿ ಕೋವಿಡ್ ನಿರ್ದೇಶನಗಳನ್ನ, ಮಾರ್ಗಸೂಚಿಗಳನ್ನ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ ಕ್ರಮ ಜರುಗಿಸಬೇಕು ಎಂದು ಸೂಚಿಸಲಾಗಿದೆ. ಒಟ್ಟಾರೆ, ಸಾರ್ವಜನಿಕರಿಗೆ ಈ ಬಾರಿ ದಸರಾವನ್ನು ನೇರವಾಗಿ ವೀಕ್ಷಿಸದಂತೆ ನಿರ್ಬಂಧಿಸಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments