Monday, December 6, 2021
No menu items!
Home Latest ದೆಹಲಿಯಲ್ಲಿ ಬಿಜೆಪಿ ಸಂಭ್ರಮಾಚರಣೆ; ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ

ದೆಹಲಿಯಲ್ಲಿ ಬಿಜೆಪಿ ಸಂಭ್ರಮಾಚರಣೆ; ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ

ನವದೆಹಲಿ : ಬಿಹಾರ ಚುನಾವಣೆಯಲ್ಲಿ ಭರ್ಜರಿ ಮತಗಳೊಂದಿಗೆ ಜಯಗಳಿಸಿರುವ ಬಿಜೆಪಿ ಪಕ್ಷ ಇಂದು ದೆಹಲಿಯಲ್ಲಿ ಸಂಭ್ರಮಾಚರಣೆ ಆಚರಿಸುತ್ತಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಭಾಜಪದ ಹಲವು ಗಣ್ಯರು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಸಂಭ್ರಮಾಚರಣೆಯ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮತದಾರರಿಗೆ ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಫುಲ್‌ ಖುಷಿಯಾಗಿರುವ ಪ್ರಧಾನಿ ಕೋಟಿ ಜನರಿಗೆ ಧನ್ಯವಾದಗಳನ್ನ ಅರ್ಪಿಸಿದ್ದಾರೆ.

ಚುನಾವಣೆ ಕೆಲವು ರಾಜ್ಯ, ಕೆಲವು ಕ್ಷೇತ್ರಗಳಲ್ಲಾಗಿರಬಹುದು. ಆದರೆ ಈ ಚುನಾವಣೆಯ ಫಲಿತಾಂಶ ಇಡೀ ದೇಶದ ಗಮನ ಸೆಳೆದಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶದ ಚುನಾವಣೆಯಲ್ಲೂ ಗೆದ್ದಿದ್ದೇವೆ, ಕರ್ನಾಟಕ, ತೆಲಂಗಾಣದಲ್ಲೂ ಬಿಜೆಪಿಗೆ ಯಶಸ್ಸು ಸಿಕ್ಕಿದೆ. ಒಂದು ಕಾಲದಲ್ಲಿ ಬಿಜೆಪಿ 2 ಸ್ಥಾನಗಳಷ್ಟೇ ಗೆಲ್ಲುತ್ತಿತ್ತು, ಆದರೆ ಈಗ ಬಿಜೆಪಿ ಎಲ್ಲ ಸ್ಥಾನವನ್ನು ಗೆದ್ದುಕೊಳ್ಳುತ್ತಿದೆ. ಬಿಜೆಪಿ ಎಲ್ಲಾ ಜನರ ಹೃದಯದಲ್ಲರಳಿದೆ. ದೇಶದ ಮೂಲೆ ಮೂಲೆಯಲ್ಲೂ ಬಿಜೆಪಿಯಿದೆ, ಎಲ್ಲಾ ಭಾಗಗಳಲ್ಲಿರುವ ಏಕೈಕ ಪಕ್ಷ ಎಂದರೆ ಬಿಜೆಪಿ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡು ಮತದಾನ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಅರ್ಪಿಸಿದ ಪ್ರಧಾನಿ ಈ ಹಬ್ಬವನ್ನು ಮಹಾನ್ ಸಂಭ್ರಮದಿಂದ ಆಚರಿಸುತ್ತೇವೆ ಎಂದಿದ್ದಾರೆ.ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments