Tuesday, August 3, 2021
No menu items!
Home Bharata ಲಕ್ಷಾಂತರ ಅನ್ನದಾತರಿಂದ ದೆಹಲಿ ಚಲೋ; ಬಿಗಿ ಪೊಲೀಸ್ ಬಂದೋಬಸ್ತ್

ಲಕ್ಷಾಂತರ ಅನ್ನದಾತರಿಂದ ದೆಹಲಿ ಚಲೋ; ಬಿಗಿ ಪೊಲೀಸ್ ಬಂದೋಬಸ್ತ್

ನವದೆಹಲಿ: ವಿವಾದಾತ್ಮಕ ಕೃಷಿ ಕಾಯ್ದೆಯ ವಿರುಧ್ಧ ಅನ್ನದಾತರು ತಿರುಗಿ ಬಿದ್ದಿದ್ದು ಇಂದು ದೆಹಲಿಗೆ ಮುತ್ತಿಗೆ ಹಾಕಲು ‘ದೆಹಲಿ ಚಲೋ’ ಪ್ರತಿಭಟನೆ ಮಾಡಲು ರೈತರು ಅಣಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರೀ ಸಂಘರ್ಷ ನಡೆಯುವ ಸಾಧ್ಯತೆಗಳಿದ್ದು ಹರಿಯಾಣ ಸರ್ಕಾರ ತನ್ನ ಪಂಜಾಬ್ ಗಡಿಯನ್ನು ಮುಚ್ಚಿದ್ದು, ದೆಹಲಿಯಲ್ಲಿ ಮೆಟ್ರೋ ಸೇವೆ ರದ್ದುಗೊಳಿಸಲಾಗಿದೆ.

ಕೃಷಿ ಕಾಯ್ದೆಯ ವಿರುದ್ಧ ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶ, ಕೇರಳ ಮತ್ತು ಪಂಜಾಬ್‌ನ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇನ್ನು ದೆಹಲಿಯತ್ತ ಮೆರವಣಿಗೆ ಹೊರಟಿರುವ ಸುಮಾರು 2 ಲಕ್ಷ ಪಂಜಾಬ್ ರೈತರು ಬುಧವಾರ ರಾತ್ರಿ ಹರಿಯಾಣ ಗಡಿಯಲ್ಲಿ ಬೀಡುಬಿಟ್ಟಿದ್ದರು. ಹರಿಯಾಣದಲ್ಲಿ ತಮ್ಮನ್ನು ಎಲ್ಲಿ ತಡೆದರೂ ಅಲ್ಲಿಯೇ ಕುಳಿತು ಪ್ರತಿಭಟನೆ ಮಾಡುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ಇನ್ನು ದೆಹಲಿಯ ಯಾವುದೇ ನಗರದಲ್ಲಿ ಯಾವುದೇ ಪ್ರತಿಭಟನಾ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ದೆಹಲಿ ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ ಗುರುಗ್ರಾಮ ಮತ್ತು ಫರೀದಾಬಾದ್ ಗಡಿ ಭಾಗಗಳಲ್ಲಿ ಭಾರಿ ಭದ್ರತೆ ಕಲ್ಪಿಸಲಾಗಿದೆ.ಮುಂದುವರಿದು ಮೆರವಣಿಗೆ ಮಾಡಿದರೆ ಮೆರವಣಿಗೆಯನ್ನು ಹತ್ತಿಕ್ಕಲು ಜಲಫಿರಂಗಿ ಮತ್ತು ಗಲಭೆ ನಿಯಂತ್ರಕ ವಾಹನಗಳನ್ನು ನಿಯೋಜಿಸಲಾಗಿದೆ.

ಅಖಿಲ ಭಾರತ ರೈತ ಸಂಘರ್ಷ ಸಹಕಾರ ಸಮಿತಿ, ರಾಷ್ಟ್ರೀಯ ಕಿಸಾನ್ ಮಹಾಸಂಘ, ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಗಳು ಈ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿವೆ. ದೇಶದ 500ಕ್ಕೂ ಹೆಚ್ಚು ರೈತ ಸಂಘಟನೆಗಳು ಈ ಪ್ರತಿಭಟನೆಗೆ ಬೆಂಬಲ ಸೂಚಿಸಿವೆ. ದೆಹಲಿಯಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ 2 ಲಕ್ಷ ರೈತರು ಸೇರಬಹುದು ಎಂದು ಅಂದಾಜಿಸಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments