Tuesday, October 26, 2021
No menu items!
Home Bharata ಉತ್ತರ ಪ್ರದೇಶದ ರೈತರಿಗೆ ದೀಪಾವಳಿ ಗಿಫ್ಟ್: ಮಂಡಿ ತೆರಿಗೆ ಶುಲ್ಕ ಅರ್ಧದಷ್ಟು ಕಡಿತ

ಉತ್ತರ ಪ್ರದೇಶದ ರೈತರಿಗೆ ದೀಪಾವಳಿ ಗಿಫ್ಟ್: ಮಂಡಿ ತೆರಿಗೆ ಶುಲ್ಕ ಅರ್ಧದಷ್ಟು ಕಡಿತ

ಉತ್ತರ ಪ್ರದೇಶ: ರಾಜ್ಯದ ಕೋಟ್ಯಂತರ ರೈತರಿಗೆ ಮಂಡಿಯಲ್ಲಿ ಉತ್ತಮ ಸೌಲಭ್ಯಗಳನ್ನು ಒದಗಿಸಲು ಮತ್ತು ಮಂಡಿಯಲ್ಲಿ ಕೆಲಸ ಮಾಡುವ ವ್ಯಾಪಾರಿಗಳನ್ನು ಉತ್ತೇಜಿಸಲು ಮಂಡಿ ತೆರಿಗೆ ಶುಲ್ಕವನ್ನು ಅರ್ಧದಷ್ಟು ಕಡಿಮೆ ಮಾಡಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹೆಚ್ಚಿನ ಪರಿಹಾರ ನೀಡಿದೆ. ಶೇಕಡಾ 2 ರಿಂದ ಕೇವಲ 1 ಕ್ಕೆ ಇಳಿಸಲು ಸಿಎಂ ಆದೇಶಿಸಿದ್ದಾರೆ.

ರೈತರಿಗೆ ಪ್ರಸ್ತುತ ಅನ್ವಯವಾಗುವ ಶೇ.2.5 ರಷ್ಟು ಒಟ್ಟು ಶುಲ್ಕದ ಬದಲು ಒಟ್ಟು ಶೇ.1.5 ರಷ್ಟು ತೆರೆಗೆಯನ್ನು ಮಾತ್ರ ರೈತರು ಪಾವತಿಸಬೇಕಾಗಲಿದೆ. ಮಂಡಳಿಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವೇಗಗೊಳಿಸಲು, ಅಭಿವೃದ್ಧಿ ತೆರಿಗೆ ದರ (0.5 ಪ್ರತಿಶತ) ಎಂದಿನಂತೆ ಮುಂದುವರೆಯಲಿದೆ.

ಕೊರೊನಾ ಮಹಾಮಾರಿಯ ಕಾಲದಲ್ಲಿ ರೈತರಿಗೆ ಹಣ್ಣು ಮತ್ತು ತರಕಾರಿಗಳ ಮಾರ್ಕೆಟಿಂಗ್ ಗಾಗಿ ಮೇ ತಿಂಗಳಿನಲ್ಲಿ ಒಟ್ಟು 45 ಸರಕುಗಳನ್ನು ಒಟ್ಟಿಗೆ ಡಿನೋಟಿಫೈ ಮಾಡಲಾಗಿತ್ತು. ಸರಕುಗಳಿಗಾಗಿ ಮಂಡಿ ಶುಲ್ಕದಿಂದ ವಿನಾಯ್ತಿ ಪಡೆದಿದ್ದರು. ಈ ಉತ್ಪನ್ನಗಳನ್ನು ಮಂಡಿ ಆವರಣದಲ್ಲಿ ತರಲು ಅವರಿಗೆ ಕೇವಲ ಶೇ.1 ರಷ್ಟು ತೆರಿಗೆ ಅನ್ವಯಿಸುತ್ತಿತ್ತು.

ಈ ಹಿಂದೆ ಉತ್ತರ ಪ್ರದೇಶ ಸರ್ಕಾರ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ರಾಜ್ಯದ ಹಲವಾರು ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಇದರಲ್ಲಿ ಪೆಪ್ಸಿಕೋ ಮಥುರಾದಲ್ಲಿ ಆಲೂಗೆಡ್ಡೆ ಚಿಪ್ಸ್ ಉತ್ಪಾದನೆಗೆ 814 ಕೋಟಿ ರೂ. ಯೋಜನೆಯನ್ನು ಘೋಷಿಸಿದೆ. ಈ ಸ್ಥಾವರವನ್ನು ಮಥುರಾದ ಕೋಸಿಯಲ್ಲಿ ಸ್ಥಾಪಿಸಲಾಗುವುದು ಮತ್ತು ಮುಂದಿನ ವರ್ಷದ ಮಾರ್ಚ್ ವೇಳೆಗೆ ಈ ಸ್ಥಾವರದಲ್ಲಿ ಚಿಪ್ಸ್ ಉತ್ಪಾದನೆ ಪ್ರಾರಂಭಿಸಲಾಗುವುದು ಎಂದು ಕಂಪನಿ ಹೇಳಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments