Tuesday, October 26, 2021
No menu items!
Home Karnataka ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ಬ್ಲ್ಯಾಕ್ ಮೇಲೆ ರಾಜಕಾರಣ ಇದೆ ಅನ್ನಿಸುತ್ತಿದೆ : ಡಿಕೆಶಿ

ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ಬ್ಲ್ಯಾಕ್ ಮೇಲೆ ರಾಜಕಾರಣ ಇದೆ ಅನ್ನಿಸುತ್ತಿದೆ : ಡಿಕೆಶಿ

ಕಾರವಾರ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾರವಾರದಲ್ಲಿ ಮಾತನಾಡಿರುವ ಅವರು, ಸಂತೋಷ್ ಆತ್ಮಹತ್ಯೆ ವಿಚಾರದ ಹಿಂದೆ , ಬ್ಲಾಕ್ ಮೇಲ್ ರಾಜಕಾರಣ ಇದೆ ಎನಿಸುತ್ತಿದೆ, ಸಂತೋಷ ಅವರನ್ನು ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರೊಬ್ಬರು ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂಬ ಸುದ್ದಿ ಎರಡು ತಿಂಗಳಿಂದ ಹರಿದಾಡಿತ್ತು. ಇದರಲ್ಲಿ ಸಾಕಷ್ಟು ಗೌಪ್ಯ ಅಡಗಿವೆ ಎಂದು ಶಿವಕುಮಾರ್ ಹೇಳಿದರು.

ಸಂತೋಷ್ ಆತ್ಮಹತ್ಯೆ ಯತ್ನ ವಿಚಾರ ನನಗೆ ಗೊತ್ತಿದೆ. ಅವರ ಯಾವುದೋ ಒಂದು ವಿಡಿಯೋವನ್ನು ಬಳಸಿ ಒಬ್ಬ ಸಚಿವ ಹಾಗೂ ಎಂಎಲ್ ಸಿ ಬೆದರಿಕೆ ಹಾಕುತ್ತಿದ್ದರು. ಆ ವಿಡಿಯೋವನ್ನು ದೆಹಲಿ ನಾಯಕರಿಗೂ ಕೊಟ್ಟಿದ್ದಾರೆ ಎಂಬ ಮಾಹಿತಿ ಎರಡು ಮೂರು ತಿಂಗಳ ಹಿಂದೆಯೇ ತಿಳಿದಿತ್ತು. ಈ ಬಗ್ಗೆ ಅವರಿಗೆ ಬೇಸರವಾಗಿದೆ ಅಂತಾ ತಿಳಿದುಬಂದಿದೆ. ಈ ವಿಡಿಯೋ ಯಾರು ಕೊಟ್ಟಿದ್ದಾರೆ ಎಂಬುದು ಉನ್ನತ ಮಟ್ಟದ ತನಿಖೆ ಮೂಲಕ ಬಹಿರಂಗವಾಗಲಿ ಎಂದು ಶಿವಕುಮಾರ್ ಹೇಳಿದ್ರು.

ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಪ್ರಕರಣ ಸರ್ಕಾರ ತನಿಖೆ ಅರ್ಥವಿಲ್ಲ. ಇದರಲ್ಲಿ ಸಾಕಷ್ಟು ಗೌಪ್ಯ ವಿಚಾರಗಳು ಅಡಗಿರುತ್ತವೆ. ಸಂತೋಷ್ ಅವರಿಗೆ ಬೆದರಿಸಿರಬಹುದು. ಸಿಎಂ ಅವರನ್ನು ಬೆದರಿಸಿರುವ ಸಾಧ್ಯತೆಗಳು ಇವೆ. ಆ ಎಂಎಲ್ ಸಿ ಹಾಗೂ ಸಚಿವರು ಇಬ್ಬರು ಬೆದರಿಸುತ್ತಿದ್ದರು ಎಂಬ ಮಾಹಿತಿ ಇತ್ತು. ಹೀಗಾಗಿ ಇದರಲ್ಲಿ ಉನ್ನತ ಮಟ್ಟದ ತನಿಖೆ ಅಗತ್ಯವಿದೆ ಎಂದು ಡಿಕೆಶಿ ಆಗ್ರಹಿಸಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments