Monday, September 27, 2021
No menu items!
Home Bharata ಡಿಎಂಕೆ ಶಾಸಕಿ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಡಿಎಂಕೆ ಶಾಸಕಿ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ತಮಿಳುನಾಡು: ಆಂತರಿಕ ಸಮಸ್ಯೆಗೆ ಮನನೊಂದ ಡಿಎಂಕೆ ಶಾಸಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ತೆಂಕಸಿಯಿಂದ ವರದಿಯಾಗಿದೆ. ಅಧಿಕ ಪ್ರಮಾಣದಲ್ಲಿ ನಿದ್ರಾ ಮಾತ್ರೆಗಳನ್ನು ಸೇವಿಸಿ ಶಾಸಕಿ ಅರುಣಾ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ.

ತಮಿಳುನಾಡಿನ ಆಲಂಗುಲಂ ಶಾಸಕಿ ಅಲ್ಲಡಿ ಅರುಣಾ ಅವರೇ ಆತ್ಮಹತ್ಯೆಗೆ ಯತ್ನಿಸಿದ ಶಾಸಕಿ. ಅಧಿಕ ಪ್ರಮಾಣದಲ್ಲಿ ನಿದ್ರೆ ಮಾತ್ರೆ ಸೇವಿಸಿ ಮಲಗಿದ್ದ ಅರುಣಾ ಅವರು, ಬೆಳಗ್ಗೆ ಸರಿಯಾದ ಸಮಯಕ್ಕೆ ಎದ್ದೇಳಲೇ ಇಲ್ಲ. ಸ್ಥಿತಿಯಲ್ಲಿದ್ದ ಕಾರಣ ಅವರನ್ನು ಕೂಡಲೇ ತಿರುನೆಲ್ವೇಲಿಯ ಶಿಪಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಯಿತು.

ಶಾಸಕಿ ಅರುಣಾ ಅವರು ಪಕ್ಷದ ಕೆಲ ಆಂತರಿಕ ವಿಚಾರಗಳಿಂದ ನೊಂದಿದ್ದರು ಎಂದು ಹೇಳಲಾಗುತ್ತಿದೆ.ಅಲ್ಲದೇ ನಿನ್ನೆ ನಡೆದ ಬೂತ್ ಸಮಿತಿ ಸಭೆಯಲ್ಲಿ, ಶಾಸಕಿಯನ್ನು ಕಡಾಯಂ ಕೇಂದ್ರ ಕಾರ್ಯದರ್ಶಿ ಕುಮಾರ್ ಅವರ ಬೆಂಬಲಿಗರು ನಿಂದಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮನನೊಂದು ಅರುಣಾ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಸದ್ಯ ಸಮಯಕ್ಕೆ ಸರಿಯಾಗಿ ಅವರನ್ನು ತಿರುನಲ್ವೇಲಿಯ ಶಿಪಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments