Tuesday, August 3, 2021
No menu items!
Home Karnataka 5 ದಿನಗಳ ಅಂತರದಲ್ಲೇ ಮತ್ತೊಂದು ಆನೆ ಸಾವು..!

5 ದಿನಗಳ ಅಂತರದಲ್ಲೇ ಮತ್ತೊಂದು ಆನೆ ಸಾವು..!

ಶಿವಮೊಗ್ಗ : ಕಾಡಾನೆ ದಾಳಿಗೆ ಸಕ್ರೆಬೈಲು ಆನೆ ಬಿಡಾರದ ಅತ್ಯಂತ ಆಕರ್ಷಣೆಯ ಆನೆ ‘ರಂಗ’ ಸಾವನ್ನಪ್ಪಿದೆ. ಕಳೆದ ವಾರವಷ್ಟೇ ಇದೇ ಶಿಬಿರದ ಏಕದಂತ ಆನೆ ಸಾವನ್ನಪ್ಪಿದ್ದು, ಐದು ದಿನಗಳ ಅಂತರದಲ್ಲಿ ಇದೀಗ ಮತ್ತೊಂದು ಆನೆ ಸಾವನ್ನಪ್ಪಿದ್ದು, ಆನೆ ಬಿಡಾರದಲ್ಲಿ ಸೂತಕದ ಛಾಯೆ ಆವರಿಸಿದೆ.

ತನ್ನ ಮೈಕಟ್ಟಿನಿಂದಲೇ ಎಲ್ಲರನ್ನೂ ಆಕರ್ಷಿಸಿದ್ದ 35 ವರ್ಷದ ಆನೆ ರಂಗ ಕಳೆದ ರಾತ್ರಿ ನಡೆದ ಕಾಡಾನೆ ಜೊತೆಗಿನ ಕಾಳಗದಲ್ಲಿ ಸಾವನ್ನಪ್ಪಿದೆ. ಸಕ್ರೆಬೈಲು ಬಿಡಾರದಲ್ಲಿ ಹುಟ್ಟಿದ ರಂಗ ಗೀತಾ ಎಂಬ ಆನೆಯ ಮರಿ ಇದಾಗಿದೆ.

ಆನೆ ಶಿಬಿರದಲ್ಲಿ ರಂಗ ಆನೆಯನ್ನು ಸರಪಳಿಯಲ್ಲಿ ಕಟ್ಟಿಹಾಕಲಾಗಿತ್ತು. ಕಳೆದ ರಾತ್ರಿ ಕಾಡಾನೆಯೊಂದು ಶಿಬಿರಕ್ಕೆ ಏಕಾಏಕಿ ದಾಳಿ ಮಾಡಿದ್ದು, ರಂಗ ಆನೆಯ ಮೇಲೆರಗಿದೆ. ಸರಪಳಿಯಲ್ಲಿ ಭಂದಿಯಾಗಿದ್ದ ರಂಗ ಅಸಹಾಯಕನಾಗಿ ಕಾಡಾನೆಯ ದಂತ ತಿವಿತಕ್ಕೆ ಬಲಿಯಾಗಿದ್ದಾನೆ.

ಆನೆಯ ನಿಧನದ ಹಿನ್ನೆಲೆಯಲ್ಲಿ ವೈದ್ಯರು ಹಾಗೂ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಕ್ಟೋಬರ್ 21ರಂದು ಇದೇ ಬಿಡಾರದ ಏಕದಂತ ಅನಾರೋಗ್ಯದ ಕಾರಣ ಸಾವನ್ನಪ್ಪಿತ್ತು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments