Wednesday, October 27, 2021
No menu items!
Home Latest ಯುರೋಪ್ ದೇಶಗಳಲ್ಲಿ ಮತ್ತೆ ಲಾಕ್ಡೌನ್, ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ ಕೊರೋನಾ …!

ಯುರೋಪ್ ದೇಶಗಳಲ್ಲಿ ಮತ್ತೆ ಲಾಕ್ಡೌನ್, ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ ಕೊರೋನಾ …!

ಕೋವಿಡ್ 19 ಮಹಾಮಾರಿ ವಿಶ್ವದಾದ್ಯಂತ ಮಾಡಿರುವ ಹಾವಳಿ ಅಷ್ಟಿಷ್ಟಲ್ಲ. ಒಂದು ಬಾರಿಯ ಹಾವಳಿಯಲ್ಲೇ ತತ್ತರಿಸಿರುವ ಜನತೆಗೆ ಮತ್ತೊಮ್ಮೆ ಕೊರೋನಾ ಹಾವಳಿಯೆಬ್ಬಿಸಲು ಅಣಿಯಾಗಿದೆ. ಕೊರೋನಾ ವಿಷಯದಲ್ಲಿ ಮೈಮರೆತ ಯುರೋಪ್ ದೇಶಗಳ ಜನತೆ ಮತ್ತೊಂದು ಲಾಕ್ಡೌನ್ ಗೆ ಸಿದ್ದರಾಗುತ್ತಿದ್ದಾರೆ.

ಕೋವಿಡ್ 19 ಮಹಾಮಾರಿ ಚೀನಿ ವೈರಸ್ ಇದೀಗಾಗಲೇ ಹಲವು ಜನರನ್ನ ಬಲಿ ತೆಗೆದುಕೊಂಡಿದೆ. ಇದು ಅಂಟುರೋಗವಾಗಿರುವುದರಿಂದ ಸಾಮಾಜಿಕ ಅಂತರ ಕಾಪಾಡುವಿಕೆ, ಮಾಸ್ಕ್ ಧಾರಣೆ ಕಡ್ಡಾಯ ಮತ್ತು ಅನಿವಾರ್ಯ . ಆದರೆ ಯುರೋಪ್ ಜನತೆ ಈ ನಿಯಮಪಾಲನೆಯಲ್ಲಿ ಕೊಂಚ ಯಾಮಾರಿದ್ದೇ ಇದೀಗ ದೇಶವನ್ನ ಮತ್ತೆ ಲಾಕ್ಡೌನ್ ನತ್ತ ಕೊಂಡೊಯ್ಯಬೇಕಾದ ಅನಿವಾರ್ಯತೆ ಎದುರಾಗಿದೆ.

ಜನರ ನಿರ್ಲಕ್ಷ್ಯ ಮತ್ತು ಹವಾಮಾನ ಬದಲಾವಣೆಯಿಂದಾಗಿ ಯುರೋಪ್ ದೇಶಗಳಲ್ಲಿ ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ.ಕೂಡಲೇ ಮುನ್ನೆಚ್ಚರಿಕೆ ಕ್ರಮವಾಗಿ ಫ್ರಾನ್ಸ್ , ಸ್ಫೇನ್ , ಜರ್ಮನಿ ದೇಶಗಳು ಕಠಿಣ ನಿಯಮಗಳನ್ನ ಜಾರಿ ಮಾಡುತ್ತಿವೆ.

ಜರ್ಮನಿ ಯಲ್ಲಿ ಥಿಯೇಟರ್‌ ಸೇರಿದಂತೆ ಹಲವು ಪ್ರದೇಶಗಳಿಗೆ ಅಲ್ಲಿನ ಸರ್ಕಾರ ನಿರ್ಭಂದ ವಿಧಿಸಿ ಆದೇಶಿಸಿದೆ .ಇನ್ನುಳಿದಂತೆ ಫ್ರಾನ್ಸ್ , ಸ್ಫೇನ್ ನಲ್ಲಿ ರಾತ್ರಿ ವೇಳೆಯಲ್ಲಿ ಮನೆಯಿಂದ ಹೊರಗಡೆ ಕಾಲಿಡದಂತೆ ಆದೇಶಿಸಿದೆ. ಒಟ್ಟಿನಲ್ಲಿ ಯುರೋಪ್ ದೇಶಗಳ ಜನತೆಗೆ ಕೊರೋನಾ ಕಾಟ, ಹೋದೆಯಾ ಪಿಶಾಚಿ ಅಂದರೆ ಬಂದೆಯಾ ಗವಾಕ್ಷಿ ಅನ್ನುವ ಸ್ಥಿತಿ ನಿರ್ಮಾಣವಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments