Saturday, June 19, 2021
No menu items!
Home Karnataka ಮಾಜಿ ಸಚಿವೆ ಉಮಾಶ್ರೀ ಮನೆ ಕಳ್ಳತನ: ಆರೋಪಿಗಳು ಅರೆಸ್ಟ್

ಮಾಜಿ ಸಚಿವೆ ಉಮಾಶ್ರೀ ಮನೆ ಕಳ್ಳತನ: ಆರೋಪಿಗಳು ಅರೆಸ್ಟ್

ಬಾಗಲಕೋಟೆ: ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ತೇರದಾಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಜಮಖಂಡಿಯ ಯಲ್ಲಪ್ಪ ಗಡ್ಡಿ ಹಾಗೂ ಹಾಗೂ ಮುಧೋಳದ ದುರ್ಗಪ್ಪ ವಾಲ್ಮೀಕಿ ಬಂಧಿತ ಆರೋಪಿಗಳು.


ಮಾಜಿ ಸಚಿವೆ ಉಮಾಶ್ರೀ ಅವರು ಸದ್ಯ ಬೆಂಗಳೂರು ನಗರದಲ್ಲಿ ವಾಸ ಮಾಡುತ್ತಿದ್ದು, ಅವರ ಬಾಗಲಕೋಟೆ ಜಿಲ್ಲೆಯ ರಬಕವಿ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿರುವ ಕಳ್ಳರು ಮನೆ ಬಾಗಿಲು ಮುರಿದು ಕಳ್ಳತನ ಮಾಡಿದ್ದರು. ನವೆಂಬರ್ 2 ರಂದು ಕಳ್ಳತನವಾಗಿತ್ತು. ಮಾಜಿ ಸಚಿವೆ ಮನೆಯಲ್ಲಿದ್ದ 2 ಲಕ್ಷ ರೂಪಾಯಿ ನಗದು ಕಳವು ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ತೇರದಾಳ ಪೊಲೀಸ್ ಠಾಣೆಗೆ ಉಮಾಶ್ರೀ ದೂರು ಕೊಟ್ಟಿದ್ದರು.

ಕಳ್ಳತನವಾದ ಸ್ಥಳಕ್ಕೆ ಸಿಪಿಐ ಕರುಣೇಸಿಗೌಡ ಮತ್ತು ಪಿಎಸ್ಐ ವಿಜಯಕುಮಾರ ಕಾಂಬಳೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಇದೀಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಬಂಧಿತರಿಂದ ಬಂಧಿತರಿಂದ 1.94 ಲಕ್ಷ ರೂಪಾಯಿಯನ್ನು ತೇರದಾಳ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಬ್ಬರಲ್ಲಿ ಓರ್ವ ಬಂಧಿತ ಆರೋಪಿ ಯಲ್ಲಪ್ಪ ಗಡ್ಡಿ ಕುಖ್ಯಾತ ಕಳ್ಳನೆಂದು ಪೊಲೀಸರು ತಿಳಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments