Monday, June 14, 2021
No menu items!
Home Bharata ಕೊರೊನಾಗೆ ಬಲಿಯಾದ ಸುಪ್ರೀಂ ಸಿಬ್ಬಂದಿ: ಉನ್ನತ ನ್ಯಾಯಾಲಯದಲ್ಲಿ ಸಂಭವಿಸಿದ ಮೊದಲ ಕೊರೊನಾ ಸಾವು..!

ಕೊರೊನಾಗೆ ಬಲಿಯಾದ ಸುಪ್ರೀಂ ಸಿಬ್ಬಂದಿ: ಉನ್ನತ ನ್ಯಾಯಾಲಯದಲ್ಲಿ ಸಂಭವಿಸಿದ ಮೊದಲ ಕೊರೊನಾ ಸಾವು..!

ನವದೆಹಲಿ: ಕೊರೊನಾ ಮಹಾಮಾರಿ ದೇಶಕ್ಕೆ ಬಂದಾಗಿನಿಂದ ತುಂಬಾ ಮುಂಜಾಗ್ರತ ಕ್ರಮವಹಿಸಲಾಗಿದೆ. ನ್ಯಾಯಾಲಯಗಳಲ್ಲಿ ಇನ್ನು ಹೆಚ್ಚಿನ ಮುತುವರ್ಜಿವಹಿಸಲಾಗಿದೆ. ಲಾಕ್ ಡೌನ್ ನಂತರದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆಗಳನ್ನ ಕೈಗೊಳ್ಳಲಾಗುತ್ತಿತ್ತು. ಆದರೂ ಕೂಡ ಸುಪ್ರೀಂ ಕೋರ್ಟ್ ಸಿಬ್ಬಂದಿ ಕೊರೊನಾಗೆ ತುತ್ತಾಗಿದ್ದಾರೆ. ಈ ಪೈಕಿ ಒಬ್ಬ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಕೊರೊನಾಗೆ ಬಲಿಯಾಗಿದ್ದಾರೆ.

ಎಸ್ಸಿಯ ಆಡಳಿತ ವಿಭಾಗದಲ್ಲಿದ್ದ ರಾಜೇಂದ್ರ ರಾವತ್ ಮೃತ ಸಿಬ್ಬಂದಿ. ರಾವತ್ ಅವರಿಗೆ ಸುಮಾರು 50 ವರ್ಷದ ರಾವತ್ ಅವರಿಗೆ ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ. ಇದು ದೇಶದ ಉನ್ನತ ನ್ಯಾಯಾಲಯದಲ್ಲಿ ಸಂಭವಿಸಿದ ಮೊದಲ ಕೊರೋನಾ ಸಾವಾಗಿದೆ.

ಐದು ದಿನಗಳ ಹಿಂದಷ್ಟೇ ಅವರ ಕೋವಿಡ್ -19 ಪರೀಕ್ಷೆ ಪಾಸಿಟಿವ್ ಬಂದಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ಸುಪ್ರೀಂ ಕೋರ್ಟ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಗಸ್ಟ್ 19 ರವರೆಗೆ ಸುಪ್ರೀಂ ಕೋರ್ಟ್ ಗೆ ಸಂಬಂಧಿಸಿದ ಸುಮಾರು 125 ರಿಜಿಸ್ಟ್ರಿ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರು ಈ ವೈರಸ್ ಸೋಂಕಿಗೆ ಒಳಗಾಗಿದ್ದರು. ಸಾಕಷ್ಟು ಸಾರ್ವಜನಿಕ ಸಾರಿಗೆ ಸೌಲಭ್ಯಗಳ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಸುಪ್ರೀಂ ಕೋರ್ಟ್ ಕಡಿಮೆ ಸಂಖ್ಯೆಯ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments