Wednesday, June 16, 2021
No menu items!
Home Bharata ಇಹಲೋಕ ತ್ಯಜಿಸಿದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೋಯ್

ಇಹಲೋಕ ತ್ಯಜಿಸಿದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೋಯ್

ಗುವಾಹಾಟಿ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ತರುಣ್ ಗೊಗೊಯ್ ಅವರಿಗೆ ಮೊದಲಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ತದನಂತರ ಅವರಿಗೆ ದೇಹದಲ್ಲಿ ಹಲವು ಸಮಸ್ಯೆ ಕಾಣಿಸಿಕೊಂಡು ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದರು. ಇದಕ್ಕಾಗಿ ಚಿಕಿತ್ಸೆ ಪಡೆಯಲು ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಾಂಗ್ರೆಸ್ ಮುಖಂಡ ತರುಣ್ ಗೊಗೊಯಿ ದಾಖಲಾಗಿದ್ದಾರು.

ಮಾಜಿ ಸಿಎಂ ತರುಣ್ ಗೊಗೊಯ್ ಅವರ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ ಎಂದು ಅವರ ಪುತ್ರ ಗೌರವ್ ಗೊಗೊಯ್ ಹೇಳಿದ್ದಾರೆ.

ಸುಮಾರು ಒಂಬತ್ತು ವೈದ್ಯರ ತಂಡ ಅವರ ಆರೋಗ್ಯ ಮೇಲ್ವಿಚಾರಣೆ ನಡೆಸುತ್ತಿತ್ತು.ಗೊಗೊಯಿ ಅವರು ಭಾನುವಾರ ಡಯಾಲಿಸಿಸ್‌ಗೆ ಒಳಗಾಗಿದ್ದರು ಮತ್ತು ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ನೀಡಲಾಗಿತ್ತು. ಅವರ ರಕ್ತದೊತ್ತಡ ಏರಿಳಿತವಾಗುತ್ತಿದ್ದುದರಿಂದ ಸಂಪೂರ್ಣವಾಗಿ ಯಂತ್ರಗಳ ಸಹಾಯದಿಂದಲೇ ಅವರು ಉಸಿರಾಡುತ್ತಿದ್ದರು. ಅಸ್ಸಾಂ ನ ದೀರ್ಘಕಾಲದ ಮುಖ್ಯಮಂತ್ರಿಯಾಗಿದ್ದ ತರುಣ್ ಗೊಗೊಯ್ ಅವರು ಇದೀಗ ಇಹಲೋಕ ತ್ಯಜಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments