ಮುಂಬೈ : ಭೀಮಾ ಕೊರೆಗಾಂವ್ ಪ್ರಕರಣ ಮತ್ತು ಮಾವೋವಾದಿಗಳ ಜೊತೆ ನಂಟು ಹೊಂದಿದ್ದ ಆರೋಪದ ಮೇಲೆ ಬಂಧಿತರಾಗಿರುವ ಸಾಮಾಜಿಕ ಹೋರಾಟಗಾರ, ಕವಿ ವರವರ ರಾವ್ ಅವರನ್ನ ಚಿಕಿತ್ಸೆಗಾಗಿ ಮುಂಬೈನ ನಾನಾವತಿ ಆಸ್ಪತ್ರೆಗೆ ಸ್ಥಳಾಂತರಿಸಲು ಮಹಾರಾಷ್ಟ್ರ ಸರ್ಕಾರ ಒಪ್ಪಿಗೆ ನೀಡಿದೆ.
ಅನಾರೋಗ್ಯಕ್ಕೆ ಒಳಗಾಗಿದ್ದ ವರವರ ರಾವ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಬೇಕೆಂದು ಪತ್ನಿ ಮನವಿ ಮಾಡಿದ್ದರು.ರಾವ್ ಅವರನ್ನು ತಕ್ಷಣವೇ ತಲೋಜ ಜೈಲಿನಿಂದ ನಾನಾವತಿ ಆಸ್ಪತ್ರೆಗೆ ದಾಖಲಿಸಬೇಕು. ಅವರನ್ನು ಬಂಧಿಸಿಯೇ ಇಡುವುದು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂದು ರಾವ್ ಅವರ ಪತ್ನಿ ಹೇಮಲತಾ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಮನವಿಯನ್ನ ಪುರಸ್ಕರಿಸದ ನ್ಯಾಯಮೂರ್ತಿಗಳಾದ ಎಸ್.ಎಸ್.ಶಿಂಧೆ ಹಾಗೂ ಮಾಧವ್ ಜಾಮ್ದಾರ್ ಅವರಿದ್ದ ಪೀಠವು, ‘ರಾವ್ ಅವರು ನಾನಾವತಿ ಆಸ್ಪತ್ರೆಗೆ ದಾಖಲಿಸಲು ಅನುಮತಿ ನೀಡಿತು.ಅಲ್ಲದೇ ರಾವ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ನ್ಯಾಯಾಲಯದ ಗಮನಕ್ಕೆ ತರದೇ ಆಸ್ಪತ್ರೆಯಿಂದ ಅವರನ್ನು ಕಳುಹಿಸಬಾರದು. ರಾವ್ ಅವರ ಎಲ್ಲ ವೈದ್ಯಕೀಯ ವರದಿಯನ್ನು ನ್ಯಾಯಾಲಯದ ಮುಂದೆ ಸಲ್ಲಿಸಬೇಕು ಮತ್ತು ಆಸ್ಪತ್ರೆಯಲ್ಲಿ ಕುಟುಂಬ ಸದಸ್ಯರಿಗೆ ರಾವ್ ಅವರನ್ನ ಭೇಟಿಯಾಗಲು ಅವಕಾಶ ನೀಡಬೇಕು ಎಂದು ಆದೇಶಿಸಿದೆ.