Tuesday, October 26, 2021
No menu items!
Home Karnataka ಮಳೆಯ ಜೊತೆಯಲ್ಲೇ ಧರೆಗೆ ಬಿದ್ದ ಚಿನ್ನ: ಆಯ್ದುಕೊಳ್ಳಲು ಮುಗಿಬಿದ್ದ ಜನ..!

ಮಳೆಯ ಜೊತೆಯಲ್ಲೇ ಧರೆಗೆ ಬಿದ್ದ ಚಿನ್ನ: ಆಯ್ದುಕೊಳ್ಳಲು ಮುಗಿಬಿದ್ದ ಜನ..!

ಆನೇಕಲ್: ಮಳೆ ಬಿದ್ದಾಗ ಆವಿಕಲ್ಲು ಬೀಳುವುದು ಎಲ್ಲರಿಗೂ ಗೊತ್ತು. ಆವಿಕಲ್ಲು ಬಿದ್ದಾಗ ಜನ ಖುಷಿಗೆ ಅದನ್ನ ಆಯ್ದುಕೊಳ್ಳುತ್ತಾರೆ, ಆಟವಾಡುತ್ತಾರೆ. ಆದ್ರೆ ನಿನ್ನೆ ಸುರಿದ ಮಳೆಯಲ್ಲಿ ಚಿನ್ನವೂ ಬಿದ್ದಿದ್ದು, ಜನ ಆಶ್ಚರ್ಯಚಕಿತರಾಗಿದ್ದಾರೆ.
ಸರ್ಜಾಪುರ ಬಾಗಲೂರು ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ಸಂಜೆ 6.30 ರ ಸುಮಾರಿಗೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದಾಗ ಈ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಜನರು ಚಿನ್ನದ ನಾಣ್ಯಗಳು ಬಿದ್ದಿರುವುದನ್ನು ಕಂಡಿದ್ದಾರೆ. ಮೊದಲಿಗೆ ಮಳೆಯ ಜೊತೆ ಚಿನ್ನದ ನಾಣ್ಯಗಳು ಆಕಾಶದಿಂದ ಉದುರುತ್ತಿದೆ ಎಂಬ ವದಂತಿ ಹರಿದಾಡಿದ ಬೆನ್ನಲ್ಲೇ ಅಲ್ಲಿನ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಾಹನ ಸವಾರರು ಜನ ಮರುಳೋ ಜಾತ್ರೆ ಮರುಳೋ ಎಂಬಂತೆ ನಾ ಮುಂದು ತಾ ಮುಂದು ಎಂದು ಮಹಿಳೆಯರು, ಪುಟ್ಟ ಪುಟ್ಟ ಮಕ್ಕಳು ಸೇರಿದಂತೆ ಪುರುಷರು ಚಿನ್ನದ ನಾಣ್ಯಗಳಿಗೆ ಮುಗಿಬಿದ್ದರು.
ಸುಮಾರು ನೂರರಿಂದ ಇನ್ನೂರು ಜನ ಗುಂಪು ಗುಂಪಾಗಿ ಜಮಾಯಿಸಿ ಮಳೆಯ ಜೊತೆ ಮಣ್ಣಿನಲ್ಲಿ ಚಿನ್ನದ ನಾಣ್ಯಗಳನ್ನು ಹುಡುಕಲು ಮುಂದಾದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಾಗಲೂರು ಪೋಲೀಸರು ಅಲ್ಲಿಂದ ಜನರನ್ನು ಚದುರಿಸಿ ಕೈಗೆ ಸಿಕ್ಕ ಒಂದೆರಡು ನಾಣ್ಯಗಳನ್ನು ತೆಗೆದುಕೊಂಡು ಹೋಗಿದ್ದು, ಇದು ಚಿನ್ನದ ನಾಣ್ಯಗಳಾ ಅಥವಾ ನಕಲಿ ನಾಣ್ಯಗಳಾ ಎನ್ನುವ ಬಗ್ಗೆ ಪರಿಶೀಲನೆಗೆ ಮುಂದಾಗಿದ್ದಾರೆ.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments