ಬೆಂಗಳೂರು : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಪುತ್ರ ಡಾ.ಗೋಪಾಲ ಕಾರಜೋಳ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರಿಗೆ ಚೆನ್ನೈನಲ್ಲಿ ಟ್ರೀಟ್ ಮೆಂಟ್ ಕೊಡಿಸಲು ಡಿಸಿಎಂ ಕಾರಜೋಳ ಮುಂದಾಗಿದ್ದಾರೆ ಎನ್ನಲಾಗಿದೆ.
ಕಾರಜೋಳ ಅವರ ಪುತ್ರ ಗೋಪಾಲ ಕಾರಜೋಳ ಅವರು ಕೊರೊನಾ ಸೋಂಕಿನಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದಾರೆ. ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ನೀಡದರೂ ಗುಣಮುಖರಾಗಿಲ್ಲ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಗೋಪಾಲ ಕಾರಜೋಳ ಅವರನ್ನು ಚೆನ್ನೈ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಡಿಸಿಎಂ ಕಾರಜೋಳ ಅವರಿಗೂ ಕೊರೊನಾ ಸೋಂಕು ತಗುಲಿತ್ತು. ಇತ್ತೀಚೆಗಷ್ಟೇ ಅವರು ಗುಣಮುಖರಾಗುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ತಮ್ಮ ಇಡೀ ಕುಟುಂಬ ಕೊರೊನಾ ಸೋಂಕಿನಿಂದ ಬಳಲುತ್ತಿದೆ ಎಂದು ತಿಳಿಸಿದ್ದರು.