ಲಕ್ನೋ: ದೇಶಾದಾದ್ಯಂತ ಭಾರೀ ಕೋಲಾಹಲ ಎಬ್ಬಿಸಿರುವ ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಪಿ ಸೇರಿದಂತೆ ನಾಲ್ವರು ಪೊಲೀಸರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.
ಹತ್ರಾಸ್ ಜಿಲ್ಲೆಯಲ್ಲಿ ನಡೆದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ತನಿಖೆ ನಡೆಸುತ್ತಿರುವ ಹತ್ರಾಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ವಿಕ್ರಾಂತ್ ವೀರ್, ಸಿಒ ರಾಮ್ ಶಾಬ್, ಇನ್ಸ್ಪೆಕ್ಟರ್ ದಿನೇಶ್ ಮೀನಾ, ಎಸ್ಐ ಜಗವೀರ್ ಸಿಂಗ್ ಮತ್ತು ಮುಖ್ಯ ಪೇದೆ ಅವರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. ಎಸ್ಪಿ ಅವರ ಜವಾಬ್ದಾರಿಯನ್ನು ಮುಂದಿನ ಆದೇಶದ ನಂತರ ವಿನೀತ್ ಜೈಸ್ವಾಲ್ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.