Thursday, September 23, 2021
No menu items!
Home Bharata ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; ಐವರ ಸಾವು, ಹಲವರ ಸ್ಥಿತಿ ಚಿಂತಾಜನಕ

ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; ಐವರ ಸಾವು, ಹಲವರ ಸ್ಥಿತಿ ಚಿಂತಾಜನಕ

ಪಶ್ಚಿಮ ಬಂಗಾಳ: ಇಲ್ಲಿನ ಮಾಲ್ಡಾ ಜಿಲ್ಲೆಯ ಸುಜಾಪುರ ಜಿಲ್ಲೆಯ ಪ್ಲಾಸ್ಟಿಕ್ ಕಾರ್ಖಾನೆಯೊಂದರಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಸ್ಪೋಟದಲ್ಲಿ ಐವರು ಸಾವನ್ನಪ್ಪಿದ್ದು ಇನ್ನು ಹಲವರಿಗೆ ಗಾಯಗಳಾಗಿದ್ದು ಹಲವರ ಸ್ಥಿತಿ ಚಿಂತಾಜನಕವಾಗಿದೆ.

ಕಾರ್ಖಾನೆಯಲ್ಲಿದ್ದ ಪ್ಲಾಸ್ಟಿಕ್ ಕ್ರಷರ್ ಯಂತ್ರದಲ್ಲಿ ಸ್ಫೋಟ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ದೇಹಗಳು ಛಿದ್ರ ಛಿದ್ರವಾಗಿವೆ. ಇನ್ನು ಕೆಲವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಮಾಲ್ಡಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ಭರದಿಂದ ಸಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸುತ್ತಿದ್ದು ಸ್ಪೋಟಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಸದ್ಯ ಪೊಲೀಸ್ ಅಧಿಕಾರಿಗಳು ತಿಳಿಸಿರುವಂತೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಸ್ಪೋಟದಿಂದ ಐದು ಮಂದಿ ಮೃತಪಟ್ಟಿದ್ದಾರೆ. ತಾಂತ್ರಿಕ ದೋಷದಿಂದ ಸ್ಫೋಟ ಸಂಭವಿಸಿರಬಹುದು. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.ಅದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಘಟನೆ ಬಗ್ಗೆ ಮಾತನಾಡಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್‍ ಧನ್‍ಕರ್ ಅವರು ನಿಸ್ಪಕ್ಷಪಾತ ತನಿಖೆ ನಡೆಸುವಂತೆ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರಕ್ಕೆ ಸೂಚಿಸಿದ್ದಾರೆ . ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ರಾಜೋರಿಯಾ ಮತ್ತು ರಾಜ್ಯ ನಗರಾಭಿವೃದ್ಧಿ ಸಚಿವ ಫಿರ್ಹಾದ್ ಹಕೀಮ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments