Thursday, September 23, 2021
No menu items!
Home Karnataka ರಾಜ್ಯದಲ್ಲಿ ಇಂದಿನಿಂದ ಮತ್ತೆ 3 ದಿನ ಅಬ್ಬರಿಸಿ ಬೊಬ್ಬಿರಿಯಲಿದ್ದಾನ ವರುಣ..?

ರಾಜ್ಯದಲ್ಲಿ ಇಂದಿನಿಂದ ಮತ್ತೆ 3 ದಿನ ಅಬ್ಬರಿಸಿ ಬೊಬ್ಬಿರಿಯಲಿದ್ದಾನ ವರುಣ..?

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ನಾಳೆಯಿಂದ ಅ.23 ರ ವರೆಗೆ ಗುಡುಗು ಗಾಳಿ ಸಹಿತ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ . ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಮೀನುಗಾರರು ಮುಂದಿನ ಮೂರು ದಿವಸ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇನ್ನು ಅ.22 ರಂದು ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದರೆ ,ಅ.20 , 21ರಂದು ಯಾದಗಿರಿ , ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿನ್ನೆ ಕೂಡಾ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಹಾಸನ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂದರೆ 7 ಸೆಂ.ಮೀ ಮಳೆ ಸುರಿದಿದ್ದಾಗಿ ವರದಿಯಾಗಿದೆ. ಉಳಿದಂತೆ ಕೃಷ್ಣರಾಜಸಾಗರದಲ್ಲಿ 5ಸೆಂ.ಮೀ, ಕೊಡಗಿನ ಸೋಮವಾರಪೇಟೆ ಯಲ್ಲಿ 4 ಸೆಂ.ಮೀ ಮಳೆಯಾಗಿರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments