Monday, June 14, 2021
No menu items!
Home Karnataka ಸ್ಯಾನಿಟೈಸರ್ ಕಂಪೆನಿಯ ಬೆಂಕಿ ಅವಘಡ ಪ್ರಕರಣ; ಗೋದಾಮಿನ ಮಾಲೀಕ ಸೇರಿ ಇಬ್ಬರ ಬಂಧನ..

ಸ್ಯಾನಿಟೈಸರ್ ಕಂಪೆನಿಯ ಬೆಂಕಿ ಅವಘಡ ಪ್ರಕರಣ; ಗೋದಾಮಿನ ಮಾಲೀಕ ಸೇರಿ ಇಬ್ಬರ ಬಂಧನ..

ಬೆಂಗಳೂರು : ಬಾಪೂಜಿನಗರದಲ್ಲಿರುವ ಸ್ಯಾನಿಟೈಸರ್ ತಯಾರಿಕ ಕಂಪೆನಿಯ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ಅವಘಡ ಸಂಬಂಧಿಸಿದಂತೆ ಕಾರ್ಖಾನೆ ಮಾಲೀಕ ಸಜ್ಜನ್ ರಾವ್ ಮತ್ತು ಕಂಪನಿ ಉದ್ಯೋಗಿ ಅನಿಲ್ ಎಂಬಾತನನ್ನು ಬಂಧಿಸಲಾಗಿದೆ.

ಎಂದಿನಂತೆ ಇಂದು ಬೆಳಗ್ಗೆ ನಾಲ್ವರು ಕಾರ್ಮಿಕರು, ರಾಸಾಯನಿಕ ವಸ್ತುಗಳನ್ನು ಆನ್‌ಲೋಡ್‌ ಮಾಡುತ್ತಿದ್ದರು. ಆಗ ಬೆಂಕಿ ಕಿಡಿ ತಾಕಿ ರಾಸಾಯನಿಕ ತುಂಬಿದ್ದ ಪೆಟ್ಟಿಗೆಗಳು ಸ್ಫೋಟಗೊಂಡಿವೆ. ಇದರಿಂದ ಕ್ಷಣಾರ್ಧದಲ್ಲಿ ಕಟ್ಟಡವನ್ನು ಅಗ್ನಿ ಜ್ವಾಲೆ ಆವರಿಸಿದೆ.ಆಕಸ್ಮಿಕವಾಗಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿಪಾಸ್ತಿ ಸುಟ್ಟು ಕರಕಲಾಗಿದೆ. .ಬೆಂಕಿಗೆ ರಾಸಾಯನಿಕ ಕಾರ್ಖಾನೆ ಹಾಗೂ ಅದರ ಪಕ್ಕದ ಎರಡು ಅಂತಸ್ತಿನ ಕಟ್ಟಡಕ್ಕೆ ಹಾನಿಯಾಗಿದೆ. ಏಳು ವಾಹನಗಳು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿವೆ. ಓರ್ವ ಕಾರ್ಮಿಕನಿಗೆ ಗಾಯವಾಗಿದೆ.ಘಟನೆ ಮೈಸೂರು ರಸ್ತೆ ಸಮೀಪದ ಬಾಪೂಜಿ ನಗರದ ಮುಖ್ಯರಸ್ತೆಯಲ್ಲಿ ನಡೆದಿದೆ.

ಸ್ಪೋಟಕ ವಸ್ತುಗಳ ಕಾಯ್ದೆಯಡಿ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಸಜ್ಜನ್ ರಾವ್ ಹಾಗೂ ಅನಿಲ್‌ ಅವರನ್ನು ಬಂಧಿಸಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments