ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಇನ್ನೂ ಕೇವಲ 15 ದಿನಗಳಷ್ಟೇ ಬಾಕಿ ಇದೆ. ಈ ನಡುವೆ ಅಮೆರಿಕಾದಲ್ಲಿ ಅಧ್ಯಕ್ಷೀಯ ಅಭ್ಯರ್ಥಿಗಳಾದ ಜೋ ಬಿಡೆನ್ ಮತ್ತು ಡೊನಾಲ್ಡ್ ಟ್ರಂಪ್ ನಡುವೆ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಯುತ್ತಿದೆ. ಡೊನಾಲ್ಡ್ ಟ್ರಂಪ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೋ ಬಿಡನ್ ಅಮೆರಿಕಾದಲ್ಲಿ ಕಮ್ಯುನಿಸಮ್ ಮತ್ತು ಪ್ರವಾಹೋಪಾದಿಯಲ್ಲಿ ಕ್ರಮಿನಲ್ ವಲಸಿಗರನ್ನು ತುಂಬಲಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವೇಳೆ ಅಮೆರಿಕಾ ಅಧ್ಯಕ್ಷಿಯ ಚುನಾವಣೆಯಲ್ಲಿ ನಾನು ಗೆಲುವು ಸಾಧಿಸಿದರೆ ನೀವು ನನ್ನನ್ನು ಮತ್ತೆ ನೋಡಬಹುದು. ಸೋತರೆ ಈ ದೇಶವನ್ನೇ ತೊರೆಯಬೇಕಾಗುತ್ತದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಭಾನುವಾರ ಜಾರ್ಜಿಯಾದ ಮ್ಯಾಕನ್ ನಲ್ಲಿ ನಡೆದ ಚುನಾವಣಾ ರ್ಯಾ ಲಿಯಲ್ಲಿ ಮಾತನಾಡಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಈ ಚುನಾವಣೆಯಲ್ಲಿ ನಾನು ಗೆಲುವು ಸಾಧಿಸಿದರೆ ನೀವು ನನ್ನನ್ನು ಮತ್ತೆ ನೋಡಬಹುದು, ಅಕಸ್ಮಾತ್ ನಾನು ಸೋಲನುಭವಿಸಿದರೆ ಭಾಗಶಃ ಈ ದೇಶವನ್ನೇ ತೊರೆಯಬೇಕಾಗುತ್ತದೆ” ಎಂದು ಹೇಳಿಕೆ ನೀಡಿದ್ದಾರೆ.
Promise? pic.twitter.com/Wbl86i8uYo
— Joe Biden (@JoeBiden) October 17, 2020
ಅಮೆರಿಕದಲ್ಲಿ ಚುನಾವಣೆ ಜೊತೆಗೆ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿರುವುದರಿಂದ ಟ್ರಂಪ್ ತಮ್ಮ ಗಮನವನ್ನು ಸಂಪೂರ್ಣವಾಗಿ ಪ್ರಮುಖ ರಿಪಬ್ಲಿಕನ್ ನೆಲೆಯ ಮೇಲೆ ಕೇಂದ್ರೀಕರಿಸಿದ್ದಾರೆ. ಅಲ್ಲಿಂದ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಹೊರಹೊಮ್ಮುತ್ತಾರೆ ಎಂಬ ಭರವಸೆಯಲ್ಲಿದ್ದಾರೆ.